Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:9 - ಕನ್ನಡ ಸಮಕಾಲಿಕ ಅನುವಾದ

9 ಅವರು ಶೀಲೋವಿನಲ್ಲಿ ಊಟಮಾಡಿದ ತರುವಾಯ ಹನ್ನಳು ಎದ್ದು ನಿಂತಳು. ಯಾಜಕನಾದ ಏಲಿ ಯೆಹೋವ ದೇವರ ಮಂದಿರದ ಸ್ತಂಭದ ಬಳಿ ಆಸನದ ಮೇಲೆ ಕುಳಿತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಶೀಲೋವಿನಲ್ಲಿದ್ದ ಒಂದು ಸಂದರ್ಭದಲ್ಲಿ, ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಹನ್ನಳು ಎದ್ದು ಯೆಹೋವನ ಮಂದಿರಕ್ಕೆ ಹೋದಳು. ಯಾಜಕನಾದ ಏಲಿಯು ಮಂದಿರದ್ವಾರದ ನಿಲುವುಗಳ ಬಳಿಯಲ್ಲಿದ್ದ ತನ್ನ ಪೀಠದ ಮೇಲೆ ಕುಳಿತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಶಿಲೋವಿನಲ್ಲಿ ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ ಹನ್ನಳು ಎದ್ದು ಸರ್ವೇಶ್ವರನ ಮಂದಿರಕ್ಕೆ ಬಂದಳು. ಯಾಜಕ ಏಲಿಯನು ಆ ಮಂದಿರದ ದ್ವಾರದ ನಿಲುವು ಪಟ್ಟಿಗಳ ಬಳಿ ಒಂದು ಪೀಠದ ಮೇಲೆ ಕುಳಿತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಅವರು ಶೀಲೋವಿನಲ್ಲಿ ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ ಹನ್ನಳು ಎದ್ದು ಯಾಜಕನಾದ ಏಲಿಯು ಯೆಹೋವನ ಮಂದಿರದ್ವಾರದ ನಿಲುವುಪಟ್ಟಿಗಳ ಬಳಿಯಲ್ಲಿ ಒಂದು ಪೀಠದ ಮೇಲೆ ಕೂತಿರುವಾಗ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹನ್ನಳು ಅನ್ನಪಾನಗಳನ್ನು ತೆಗೆದುಕೊಂಡು ಸದ್ದಿಲ್ಲದೆ ಮೇಲೆದ್ದು ಯೆಹೋವನಿಗೆ ಪ್ರಾರ್ಥಿಸಲು ಹೋದಳು. ಯೆಹೋವನ ಪವಿತ್ರ ಆಲಯದ ದ್ವಾರದ ಹತ್ತಿರ ಯಾಜಕನಾದ ಏಲಿಯು ಕುಳಿತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:9
9 ತಿಳಿವುಗಳ ಹೋಲಿಕೆ  

ದೇವರ ಮಂಜೂಷವಿರುವ ಯೆಹೋವ ದೇವರ ಮಂದಿರದಲ್ಲಿ ದೇವರ ದೀಪವು ಆರಿಹೋಗುವುದಕ್ಕಿಂತ ಮುಂಚೆ ಸಮುಯೇಲನು ಮಲಗಿದ್ದನು.


ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.


ನಾನಾದರೋ, ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಿಮ್ಮ ಮನೆಗೆ ಬರುವೆನು; ಭಕ್ತಿಭಾವದಿಂದ ನಿಮ್ಮ ಪರಿಶುದ್ಧ ಆಲಯದ ಕಡೆಗೆ ತಲೆಬಾಗುವೆನು.


ಒಂದು ದಿನ ಅರಸನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ದೇವರ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.


ಸಮುಯೇಲನು ಉದಯದವರೆಗೂ ಮಲಗಿದ್ದು, ಯೆಹೋವ ದೇವರ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುಯೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯಪಟ್ಟನು.


ಯೆಹೋವ ದೇವರ ಧ್ವನಿಯು ಜಿಂಕೆಗಳು ಈಯುವಂತೆ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ದೇವರ ಮಂದಿರದಲ್ಲಿ ಪ್ರತಿಯೊಬ್ಬರೂ “ಮಹಿಮೆ!” ಎಂದು ಘೋಷಿಸುತ್ತಾರೆ.


ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು, ಬಾಗಿಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ, ಅವನ ಯಜಮಾನನು ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ದಾಸನಾಗಿರಬೇಕು.


ಅವಳು ಬಹಳ ಮನಗುಂದಿದವಳಾಗಿ ಯೆಹೋವ ದೇವರನ್ನು ಪ್ರಾರ್ಥಿಸಿ, ಅತ್ತು ಒಂದು


ಅವನು ಬರುವಾಗ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವುದರಿಂದ, ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನುಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು