1 ಸಮುಯೇಲ 10:19 - ಕನ್ನಡ ಸಮಕಾಲಿಕ ಅನುವಾದ19 ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಅವರಿಗೆ, ‘ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು,’ ಎಂದು ಹೇಳಿದಿರಿ. ಆದ್ದರಿಂದ ಈಗ ಯೆಹೋವ ದೇವರ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ, ನಿಮ್ಮ ಕುಲಗಳ ಪ್ರಕಾರವಾಗಿಯೂ ಬನ್ನಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ ನಮಗೊಬ್ಬ ಅರಸನನ್ನು ನೇವಿುಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದದರಿಂದ ನೀವು ಕುಲಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ ಎಂದು ಅಪ್ಪಣೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಇಂದು ನೀವು ನಿಮ್ಮ ದೇವರನ್ನು ತಿರಸ್ಕರಿಸಿರುವಿರಿ. ನಿಮ್ಮ ದೇವರು ನಿಮ್ಮನ್ನು ಕಷ್ಟಗಳಿಂದ ಮತ್ತು ಸಮಸ್ಯೆಗಳಿಂದ ರಕ್ಷಿಸುತ್ತಾನೆ. ಆದರೆ ನೀವು, ‘ಇಲ್ಲ, ನಮ್ಮನ್ನಾಳಲು ನಮಗೊಬ್ಬ ರಾಜನು ಬೇಕು’ ಎಂದು ಕೇಳಿದಿರಿ. ಈಗ ಬನ್ನಿ, ನೀವು, ನಿಮ್ಮ ಕುಲಗಳ ಮತ್ತು ಗೋತ್ರಗಳ ಸಮೇತವಾಗಿ ಯೆಹೋವನ ಸಮ್ಮುಖದಲ್ಲಿ ನಿಲ್ಲಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |