Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:22 - ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ ಅವರು, “ಅವನು ಇನ್ನು ಇಲ್ಲಿ ಬರುವನೋ?” ಎಂದು ಯೆಹೋವ ದೇವರನ್ನು ವಿಚಾರಿಸಿದರು. ಯೆಹೋವ ದೇವರು, “ಇಗೋ, ಅವನು ಸಲಕರಣೆಗಳಲ್ಲಿ ಅಡಗಿಕೊಂಡಿದ್ದಾನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರು, “ಆ ವ್ಯಕ್ತಿ ಇಲ್ಲಿಗೆ ಬರುವನೋ?” ಎಂದು ಸರ್ವೇಶ್ವರನನ್ನು ವಿಚಾರಿಸಿದಾಗ, “ಬಂದಿದ್ದಾನೆ; ಇಗೋ, ಸರಕು ಸಾಮಾನುಗಳ ನಡುವೆ ಅಡಗಿಕೊಂಡಿದ್ದಾನೆ,” ಎಂದು ಉತ್ತರ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು - ಆ ಮನುಷ್ಯನು ಇಲ್ಲಿಗೆ ಬರುವನೋ ಎಂದು ಯೆಹೋವನನ್ನು ವಿಚಾರಿಸಿದಾಗ ಆತನು - ಬಂದಿದ್ದಾನೆ; ಇಗೋ, ಸಾಮಾನುಗಳಲ್ಲಿ ಅಡಗಿಕೊಂಡಿದ್ದಾನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಅವರು ಯೆಹೋವನನ್ನು, “ಸೌಲನು ಇಲ್ಲಿಗೆ ಬರುವನೋ?” ಎಂದು ಕೇಳಿದರು. ಯೆಹೋವನು, “ಸೌಲನು ಸರಕುಗಳ ಹಿಂದೆ ಅಡಗಿಕೊಂಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:22
19 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲರು ಬೇತೇಲಿಗೆ ಹೋಗಿ, ತಮ್ಮಲ್ಲಿ ಮೊದಲು ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕಾದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಮೊದಲು ಹೋಗಬೇಕು,” ಎಂದರು.


ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.


ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


ಆಗ ಸಮುಯೇಲನು, “ನೀನು ನಿನ್ನ ದೃಷ್ಟಿಯಲ್ಲಿ ಚಿಕ್ಕವನಾಗಿರುವಾಗಲೇ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ನೇಮಕವಾದಿಯಲ್ಲವೆ? ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿ ಅಭಿಷೇಕಿಸಿದರಲ್ಲವೆ?


ಸೌಲನು ಅದಕ್ಕೆ, “ಆದರೆ ನಾನು ಇಸ್ರಾಯೇಲನ ಸಣ್ಣ ಗೋತ್ರವಾದ ಬೆನ್ಯಾಮೀನನು ನಾನಲ್ಲವೋ, ಬೆನ್ಯಾಮೀನನ ಗೋತ್ರದಲ್ಲಿ ನನ್ನ ವಂಶವು ಸಣ್ಣದಾದದ್ದಲ್ಲವೋ? ಇಂಥ ಸಂಗತಿಯನ್ನು ನನಗೇಕೆ ಹೇಳುತ್ತೀ?” ಎಂದನು.


ಆರೋನನ ಮೊಮ್ಮಗನೂ, ಎಲಿಯಾಜರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದದರಿಂದಲೂ, ಇಸ್ರಾಯೇಲರು, “ನಮ್ಮ ಸಹೋದರರಾದ ಬೆನ್ಯಾಮೀನ್ಯರಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವುದಕ್ಕೆ ಹೋಗಬೇಕೋ ಬೇಡವೋ?” ಎಂದು ದೇವರನ್ನು ಕೇಳಿಕೊಂಡರು. ಯೆಹೋವ ದೇವರು, “ಹೋಗಿರಿ, ಏಕೆಂದರೆ ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.


ಇಸ್ರಾಯೇಲರು ಯೆಹೋವ ದೇವರ ಬಳಿಗೆ ಹೋಗಿ, ಅವರ ಮುಂದೆ ಸಂಜೆಯವರೆಗೆ ಅತ್ತು, “ನಮ್ಮ ಸಹೋದರರಾದ ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕೋ?” ಎಂದು ಯೆಹೋವ ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಅವರ ಮೇಲೆ ಹೋಗಿರಿ,” ಎಂದರು. ಎರಡನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರ ಬಳಿಗೆ ಬಂದರು.


ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.


ಅವಳ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು, “ನನಗೆ ಏಕೆ ಹೀಗಾಗುತ್ತಿದೆ?” ಎಂದು ಕೇಳಿ, ಯೆಹೋವ ದೇವರ ಬಳಿಗೆ ವಿಚಾರಿಸುವುದಕ್ಕೆ ಹೋದಳು.


ಅವನು ಬೆನ್ಯಾಮೀನನ ಗೋತ್ರವನ್ನು ಅದರ ಕುಲಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ, ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟು ಬಿದ್ದಿತು. ಆದರೆ ಅವನನ್ನು ಹುಡುಕುವಾಗ, ಅವನು ಸಿಕ್ಕಲಿಲ್ಲ.


ಅದಕ್ಕೆ ಸೌಲನು, “ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀವು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ದೇವರ ಆಲೋಚನೆಯನ್ನು ಕೇಳಿದನು. ಆದರೆ ಅವರು ಅವನಿಗೆ ಆ ದಿವಸದಲ್ಲಿ ಉತ್ತರ ಕೊಡದೆ ಹೋದರು.


ಇವನು ಅವನಿಗೋಸ್ಕರ ಯೆಹೋವ ದೇವರನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು, ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಅವನಿಗೆ ಕೊಟ್ಟನು,” ಎಂದನು.


ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿದ್ದರಿಂದ ಯಾಜಕನಾದ ಅಬಿಯಾತರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದನು.


ಆಗ ದಾವೀದನು ಅಹೀಮೆಲೆಕನ ಮಗ ಅಬಿಯಾತರನೆಂಬ ಯಾಜಕನಿಗೆ, “ನೀನು ದಯಮಾಡಿ ಏಫೋದನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ಅಬ್ಯತಾರನು ಏಫೋದನ್ನು ದಾವೀದನ ಬಳಿಗೆ ತಂದನು.


ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.


ಇದಾದ ಮೇಲೆ ದಾವೀದನು ಯೆಹೋವ ದೇವರನ್ನು, “ಯೆಹೂದದ ಪಟ್ಟಣಗಳಲ್ಲಿ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಿದನು. ಯೆಹೋವ ದೇವರು ಅವನಿಗೆ, “ಹೋಗು,” ಎಂದರು. ಅದಕ್ಕವನು, “ನಾನು ಎಲ್ಲಿಗೆ ಹೋಗಲಿ?” ಎಂದನು. ಅದಕ್ಕೆ ದೇವರು, “ಹೆಬ್ರೋನಿಗೆ,” ಎಂದರು.


ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು