Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 10:5 - ಕನ್ನಡ ಸಮಕಾಲಿಕ ಅನುವಾದ

5 “ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಲ್ಲಿಂದ ದೇವಗಿರಿಯನ್ನು ಮುಟ್ಟಿದಾಗ ಫಿಲಿಷ್ಟಿಯರ ದಂಡುಪ್ರದೇಶವನ್ನು ಕಾಣುವೆ; ಮುಂಗಡೆಯಲ್ಲಿ ಸ್ವರಮಂಡಲ, ತಮ್ಮಟೆ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಗಳ ಒಂದು ಗುಂಪನ್ನು ಕಾಣುವೆ. ಅವರು ಪರವಶರಾಗಿ ಪ್ರವಾದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಂತರ ನೀನು ಗಿಬಿಯತ್ ಎಲೋಹಿಮಿಗೆ ಹೋಗುವೆ. ಅಲ್ಲಿ ಒಂದು ಫಿಲಿಷ್ಟಿಯರ ಕೋಟೆಯಿದೆ. ನೀನು ಆ ಪಟ್ಟಣಕ್ಕೆ ಬಂದಾಗ, ಪ್ರವಾದಿಗಳ ಗುಂಪೊಂದು ಹೊರಬರುತ್ತದೆ. ಈ ಪ್ರವಾದಿಗಳು ಆರಾಧನಾ ಸ್ಥಳದಿಂದ ಇಳಿದು ಬರುತ್ತಾರೆ, ಅವರು ಪ್ರವಾದಿಸುತ್ತಿರುತ್ತಾರೆ. ಅವರು ಸ್ವರಮಂಡಲವನ್ನೂ ದಮ್ಮಡಿಯನ್ನೂ ಕೊಳಲನ್ನೂ ಕಿನ್ನರಿಯನ್ನೂ ನುಡಿಸುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 10:5
27 ತಿಳಿವುಗಳ ಹೋಲಿಕೆ  

ಆದರೆ ಈಗ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬಾ,” ಎಂದನು. ಆ ವಾದ್ಯ ಬಾರಿಸುವವನು ಬಾರಿಸಿದಾಗ, ಯೆಹೋವ ದೇವರ ಕೈ ಎಲೀಷನ ಮೇಲೆ ಬಂತು.


ಆದ್ದರಿಂದ ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದನು. ಪ್ರವಾದಿಗಳ ಗುಂಪು ಪ್ರವಾದಿಸುವುದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುಯೇಲನು ನಿಂತಿರುವುದನ್ನೂ ಕಂಡಾಗ, ದೇವರ ಆತ್ಮ ಸೌಲನ ದೂತರ ಮೇಲೆ ಬಂದಿತು, ಅವರೂ ಸಹ ಪ್ರವಾದಿಸಿದರು.


ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ತಿಳಿದುಬಂತು. ಆದ್ದರಿಂದ ಸೌಲನು ದೇಶದಲ್ಲೆಲ್ಲಾ ಹಿಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.


ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.


ಆಗ ಯೆರಿಕೋವಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


ಅವನು ಗಿಬೆಯದ ಗುಡ್ಡಕ್ಕೆ ಬಂದಾಗ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು. ಆಗ ದೇವರ ಆತ್ಮವು ಅವನ ಮೇಲೆ ಬಂದದ್ದರಿಂದ, ಅವರಲ್ಲಿದ್ದು ಪ್ರವಾದಿಸಿದನು.


ಪ್ರೀತಿಯ ಮಾರ್ಗ ಅನುಸರಿಸಿರಿ, ಆತ್ಮಿಕ ವರಗಳನ್ನು, ವಿಶೇಷವಾಗಿ ಪ್ರವಾದಿಸುವ ವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ.


ಸಾಮ್ಯಕ್ಕೆ ನನ್ನ ಕಿವಿಗೊಟ್ಟು ಒಗಟನ್ನು ಕಿನ್ನರಿಯಿಂದ ಬಿಚ್ಚುವೆನು.


ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು.


ಅವರು ಯಾರೆಂದರೆ: ಮುಖ್ಯಸ್ಥನಾದ ಆಸಾಫನೂ, ಅವನ ತರುವಾಯ ಜೆಕರ್ಯನೂ, ಯೆಜೀಯೇಲನೂ, ಶೆಮೀರಾಮೋತನೂ, ಯೆಹೀಯೇಲನೂ, ಮತ್ತಿತ್ಯನೂ, ಎಲೀಯಾಬನೂ, ಬೆನಾಯನೂ, ಓಬೇದ್ ಏದೋಮನೂ, ಯೆಹಿಯೇಲನೂ ಇವರು ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಿದ್ದರು. ಆದರೆ ಆಸಾಫನು ತಾಳಗಳನ್ನು ಬಾರಿಸುತ್ತಿದ್ದನು.


ಆಗ ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ದೇವರ ಮುಂದೆ ಹೋದರು.


ಪ್ರವಾದಿಗಳ ಮಂಡಳಿಯು ಎಲೀಷನಿಗೆ, “ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. ಅಪ್ಪಣೆಕೊಡು,


ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು.


ಅವರು ಇವರಿಗೆ ಉತ್ತರವಾಗಿ, “ಅವನು ಇದ್ದಾನೆ, ನಿಮ್ಮ ಮುಂದೆ ಇದ್ದಾನೆ, ಈಗ ಬೇಗ ಹೋಗಿರಿ, ಏಕೆಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವುದರಿಂದ ಅವನು ಈ ಹೊತ್ತು ಪಟ್ಟಣಕ್ಕೆ ಬಂದಿದ್ದಾನೆ.


ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ, ನಿನಗೆ ಎರಡು ರೊಟ್ಟಿಗಳನ್ನು ಕೊಡುವರು. ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವೆ.


ಸೌಲನು ಇಸ್ರಾಯೇಲರೊಳಗಿಂದ ಮೂರು ಸಾವಿರ ಜನ ಪುರುಷರನ್ನು ಆಯ್ದುಕೊಂಡನು. ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯು, ಬೇತೇಲಿನ ದಿನ್ನೆ ಪ್ರದೇಶಗಳಲ್ಲಿಯು ಇದ್ದರು. ಒಂದು ಸಾವಿರ ಜನರು ಬೆನ್ಯಾಮೀನ್ಯರ ಗಿಬೆಯದಲ್ಲಿ ಯೋನಾತಾನನ ಜೊತೆಗಿದ್ದರು. ಉಳಿದ ಜನರನ್ನು ಅವನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.


ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.


ಹತ್ತು ತಂತಿವಾದ್ಯದಿಂದಲೂ ವೀಣೆಯಿಂದಲೂ ಕಿನ್ನರಿಯ ಘನಸ್ವರದಿಂದಲೂ ಬಾರಿಸುವುದು ಒಳ್ಳೆಯದು.


ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.


ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನ್ ನದಿ ಬಳಿಯಲ್ಲಿ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು