1 ಸಮುಯೇಲ 11:11 - ಕನ್ನಡ ಸಮಕಾಲಿಕ ಅನುವಾದ11 ಮಾರನೆಯ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ, ಬೆಳಗಿನ ಜಾವದಲ್ಲಿ ಪಾಳೆಯದಲ್ಲಿ ಬಂದು, ಬಿಸಿಲೇರುವವರೆಗೆ ಅಮ್ಮೋನಿಯರನ್ನು ಸಂಹರಿಸಿದನು. ಉಳಿದವರು ಚದರಿಹೋದರು. ಅವರಲ್ಲಿ ಒಬ್ಬರು ಕೂಡ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಂಗಡವಾಗಿ ವಿಂಗಡಿಸಿದನು. ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ದಾಳಿಮಾಡಿ ಮಧ್ಯಾಹ್ನದವರೆಗೆ ಅವರನ್ನು ಸದೆಬಡಿದನು. ಅಳಿದುಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಾಲು ಮಾಡಿ ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ಅವರನ್ನು ಮಧ್ಯಾಹ್ನದವರೆಗೆ ಹತಮಾಡಿದನು; ಉಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಮಾರನೆಯ ದಿನ ಬೆಳಿಗ್ಗೆ ಸೌಲನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಸೌಲನು ಮತ್ತು ಅವನ ಸೈನಿಕರು ಬೆಳಗಿನ ಜಾವದಲ್ಲೇ ಅಮ್ಮೋನಿಯರ ಶಿಬಿರದೊಳಕ್ಕೆ ನುಗ್ಗಿದರು. ಅವರು ಆ ದಿನ ಬೆಳಗಿನ ಜಾವ ಶಿಬಿರ ರಕ್ಷಕರನ್ನು ಬದಲಾಯಿಸುತ್ತಿದ್ದಂತೆಯೇ ಸೌಲನು ಆಕ್ರಮಣ ಮಾಡಿದನು. ಸೌಲನು ಮತ್ತು ಅವನ ಸೈನಿಕರು ನಡುಮಧ್ಯಾಹ್ನದೊಳಗೆ ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯ ಸೈನಿಕರೆಲ್ಲರೂ ದಿಕ್ಕುಪಾಲಾಗಿ ಓಡಿಹೋದರು; ಅವರು ಒಟ್ಟಾಗಿ ಸೇರಿಬರಲು ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿ |