Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಸಮುಯೇಲನು ಜನರಿಗೆ, “ನಾವು ಗಿಲ್ಗಾಲಿಗೆ ಹೋಗಿ, ಅಲ್ಲಿ ರಾಜ್ಯತ್ವವನ್ನು ದೃಢೀಕರಿಸೋಣ ಬನ್ನಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಮುವೇಲನು ಜನರಿಗೆ, “ಬನ್ನಿ, ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಘೋಷಿಸೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಮುವೇಲನು ಜನರಿಗೆ - ಬನ್ನಿರಿ; ಗಿಲ್ಗಾಲಿಗೆ ಹೋಗಿ ಅರಸುತನವನ್ನು ಸ್ಥಿರಪಡಿಸೋಣ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ಸಮುವೇಲನು, “ನಾವೆಲ್ಲ ಗಿಲ್ಗಾಲಿಗೆ ಹೋಗಿ ಸೌಲನನ್ನು ಮತ್ತೆ ರಾಜನನ್ನಾಗಿ ಮಾಡೋಣ” ಎಂದು ಜನರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:14
8 ತಿಳಿವುಗಳ ಹೋಲಿಕೆ  

“ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದು ಹೋಗಬೇಕು. ನಾನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು,” ಎಂದನು.


ಅವನು ಪ್ರತಿವರ್ಷ ಹೊರಟು ಬೇತೇಲನ್ನೂ, ಗಿಲ್ಗಾಲನ್ನೂ, ಮಿಚ್ಪೆಯನ್ನೂ ಸುತ್ತಿಕೊಂಡು ಹೋಗಿ ಆ ಸ್ಥಳಗಳಲ್ಲೆಲ್ಲಾ ಇಸ್ರಾಯೇಲರಿಗೆ ನ್ಯಾಯತೀರಿಸಿದನು.


ಅಷ್ಡೋದ್ಯರು ಮಾರನೆಯ ದಿವಸ ಎದ್ದಾಗ, ದಾಗೋನ್ ವಿಗ್ರಹ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.


ಸಮುಯೇಲನು ಇಸ್ರಾಯೇಲರೆಲ್ಲರಿಗೆ, “ನೀವು ನನಗೆ ಹೇಳಿದ್ದೆಲ್ಲದರಲ್ಲಿ ನಿಮ್ಮ ಮಾತು ಕೇಳಿ, ನಿಮ್ಮ ಮೇಲೆ ಒಬ್ಬ ಅರಸನನ್ನು ಇಟ್ಟೆನು.


ಅರಸನು ತಿರುಗಿ ಯೊರ್ದನಿನವರೆಗೂ ಬಂದನು. ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವುದಕ್ಕೆ ಗಿಲ್ಗಾಲಿಗೆ ಬಂದರು.


ಆದರೆ ಬೇತೇಲನ್ನು ಹುಡುಕಬೇಡಿರಿ. ಗಿಲ್ಗಾಲಿಗೆ ಹೋಗಬೇಡಿರಿ. ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಏಕೆಂದರೆ ಗಿಲ್ಗಾಲು ಸೆರೆಗೆ ನಿಶ್ವಯವಾಗಿ ಹೋಗುವುದು, ಬೇತೇಲಿನ ಬಾಧೆಗಳು ಕೊನೆಗೊಳ್ಳುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು