Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:15 - ಕನ್ನಡ ಸಮಕಾಲಿಕ ಅನುವಾದ

15 ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ, ಆ ಸ್ಥಳದಲ್ಲಿ ಯೆಹೋವ ದೇವರ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ, ಯೆಹೋವ ದೇವರಿಗೆ ಸಮಾಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲರೂ ಬಹಳವಾಗಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರೆಲ್ಲರು ಅಲ್ಲಿಗೆ ಹೋಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಘೋಷಿಸಿ ಸ್ಥಿರಪಡಿಸಿದರು. ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು. ಸೌಲನೊಡನೆ ಸೇರಿ ಬಹಳವಾಗಿ ಆನಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ ಯೆಹೋವನಿಗೆ ಸಮಾಧಾನಯಜ್ಞಗಳನ್ನು ಸಮರ್ಪಿಸಿ ಸೌಲನೊಡನೆ ಬಹಳವಾಗಿ ಆನಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರೆಲ್ಲ ಗಿಲ್ಗಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರೆಲ್ಲ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:15
12 ತಿಳಿವುಗಳ ಹೋಲಿಕೆ  

“ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದು ಹೋಗಬೇಕು. ನಾನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು,” ಎಂದನು.


ಸಮುಯೇಲನು ಇಸ್ರಾಯೇಲರನ್ನು ಮಿಚ್ಪೆಯಲ್ಲಿ ಯೆಹೋವ ದೇವರ ಬಳಿಗೆ ಒಟ್ಟಾಗಿ ಕರೆದು ಅವರಿಗೆ,


ಆದರೆ ನೀವು ನಿಮ್ಮ ಹೊಗಳಿಕೆಯ ಯೋಜನೆಗಳಲ್ಲಿ ಹೆಮ್ಮೆಪಡುತ್ತೀರಿ. ಅಂಥಾ ಅಹಂಭಾವವೆಲ್ಲಾ ಕೆಟ್ಟದ್ದೆ.


ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದರಿಂದ, ಯೆಹೋವ ದೇವರ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತನವು ಹೆಚ್ಚಾಗಿದೆ ಎಂದು ತಿಳಿದುಕೊಂಡು ನೋಡುವ ಹಾಗೆ, ನಾನು ಯೆಹೋವ ದೇವರಿಗೆ ಮೊರೆಯಿಡುವೆನು. ಆಗ ಅವರು ಗುಡುಗನ್ನೂ, ಮಳೆಯನ್ನೂ ಕಳುಹಿಸುವರು,” ಎಂದನು.


ಆದರೂ ಜನರು ಸಮುಯೇಲನ ಮಾತನ್ನು ಕೇಳಲೊಲ್ಲದೆ, ಅವರು, “ಹಾಗಲ್ಲ, ನಮ್ಮ ಮೇಲೆ ಅರಸನು ಇರಬೇಕು.


ಅವನು ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಹೋರಿಗಳನ್ನೂ ಅರ್ಪಿಸುವುದಕ್ಕಾಗಿ ಇಸ್ರಾಯೇಲರ ಯೌವನಸ್ಥರನ್ನು ಕಳುಹಿಸಲು ಅವರು ಅದನ್ನು ಅರ್ಪಿಸಿದರು.


ಸಮುಯೇಲನು ಇಸ್ರಾಯೇಲರೆಲ್ಲರಿಗೆ, “ನೀವು ನನಗೆ ಹೇಳಿದ್ದೆಲ್ಲದರಲ್ಲಿ ನಿಮ್ಮ ಮಾತು ಕೇಳಿ, ನಿಮ್ಮ ಮೇಲೆ ಒಬ್ಬ ಅರಸನನ್ನು ಇಟ್ಟೆನು.


ಅರಸನು ತಿರುಗಿ ಯೊರ್ದನಿನವರೆಗೂ ಬಂದನು. ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವುದಕ್ಕೆ ಗಿಲ್ಗಾಲಿಗೆ ಬಂದರು.


ಆಗ ಸಮುಯೇಲನು, “ಯೆಹೋವ ದೇವರು ಆಯ್ದುಕೊಂಡವನನ್ನು ನೋಡಿರಿ, ಸಮಸ್ತ ಜನರಿಗೆ ಎಲ್ಲಾ ಜನರಲ್ಲಿ ಇವನಿಗೆ ಸಮಾನವಾದವನು ಯಾವನೂ ಇಲ್ಲವಲ್ಲ,” ಎಂದನು. ಜನರೆಲ್ಲರು ಆರ್ಭಟಿಸಿ, “ಅರಸ ಬಾಳಲಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು