1 ಸಮುಯೇಲ 11:2 - ಕನ್ನಡ ಸಮಕಾಲಿಕ ಅನುವಾದ2 ಅಮ್ಮೋನ್ಯನಾದ ನಾಹಾಷನು ಅವರಿಗೆ, “ಇಸ್ರಾಯೇಲರಿಗೆ ಅವಮಾನಪಡಿಸುವುದಕ್ಕಾಗಿ ನಿಮ್ಮೆಲ್ಲರ ಬಲಗಣ್ಣುಗಳನ್ನು ಕಿತ್ತು ಹಾಕುವ ಒಂದೇ ನಿಬಂಧನೆಯಿಂದ, ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದಕ್ಕೆ ಅವನು, “ಇಸ್ರಯೇಲರೆಲ್ಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತು ಹಾಕುತ್ತೇನೆ. ಇದಕ್ಕೆ ನೀವು ಒಪ್ಪುವಿರಾದರೆ ನಿಮ್ಮ ಸಂಗಡ ಸಂಧಾನ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದಕ್ಕೆ ಅವನು - ಎಲ್ಲಾ ಇಸ್ರಾಯೇಲ್ಯರನ್ನು ಅವಮಾನಪಡಿಸುವದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವಿರಾದರೆ ನಿಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳುತ್ತೇನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ಅಮ್ಮೋನಿಯನಾದ ನಾಹಾಷನು, “ನಾನು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕಿದಾಗ ಮಾತ್ರ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆಗ ಇಸ್ರೇಲರಿಗೆಲ್ಲಾ ಅವಮಾನವಾಗುವುದು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿ |