Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 11:8 - ಕನ್ನಡ ಸಮಕಾಲಿಕ ಅನುವಾದ

8 ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ, ಇಸ್ರಾಯೇಲರು ಮೂರು ಲಕ್ಷ ಜನರೂ, ಯೆಹೂದ್ಯರಲ್ಲಿ ಮೂವತ್ತು ಸಾವಿರ ಜನರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲ್ಯರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸೌಲನು ಬೆಜೆಕಿನಲ್ಲಿ ಅವರೆಲ್ಲರನ್ನೂ ಒಟ್ಟುಗೂಡಿಸಿದನು. ಅಲ್ಲಿ ಮೂರು ಲಕ್ಷ ಇಸ್ರೇಲರೂ ಮೂವತ್ತು ಸಾವಿರ ಯೆಹೂದ್ಯರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 11:8
8 ತಿಳಿವುಗಳ ಹೋಲಿಕೆ  

ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.


ಆಗ ಸೌಲನು ತೆಲಾಯಿಮಿನಲ್ಲಿ ಜನರನ್ನು ಕೂಡಿಸಿ, ಲೆಕ್ಕ ಮಾಡಿದನು. ಇಸ್ರಾಯೇಲರ ಕಾಲಾಳುಗಳು ಎರಡು ಲಕ್ಷ ಜನರೂ, ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು.


ಸಮುಯೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾಮೀನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ, ಅವರು ಸುಮಾರು ಆರುನೂರು ಜನರಿದ್ದರು.


ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಖಡ್ಗ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಮೂಹದ ಜನರಲ್ಲಿಗೆ ಬಂದರು.


ಆಗ ಅವರು ಬಂದ ದೂತರಿಗೆ, “ನೀವು ಗಿಲ್ಯಾದಿನಲ್ಲಿರುವ ಯಾಬೇಷಿನ ಜನರಿಗೆ, ‘ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವುದು,’ ಎಂದು ಹೇಳಿರಿ,” ಎಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ, ಅವರು ಸಂತೋಷಪಟ್ಟರು.


ಆ ದಿವಸದಲ್ಲಿ ಅರಸನಾದ ಯೋರಾಮನು ಸಮಾರ್ಯದಿಂದ ಹೊರಟುಹೋಗಿ ಇಸ್ರಾಯೇಲರನ್ನು ಕೂಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು