Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ, ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ಬಿಡಿಸಿ ಸುರಕ್ಷಿತವಾಗಿ ಜೀವಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದ್ದರಿಂದ ಯೆಹೋವನು ಯೆರುಬ್ಬಾಳ್, ಬಾರಾಕ್, ಯೆಫ್ತಾಹ ಮತ್ತು ಸಮುವೇಲ ಎಂಬವರನ್ನು ಕಳುಹಿಸಿದನು. ನಿಮ್ಮನ್ನು ಸುತ್ತುವರಿದಿದ್ದ ಶತ್ರುಗಳಿಂದ ಯೆಹೋವನು ರಕ್ಷಿಸಿದನು. ನೀವು ಸುರಕ್ಷಿತವಾಗಿ ವಾಸಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:11
13 ತಿಳಿವುಗಳ ಹೋಲಿಕೆ  

ಗಿದ್ಯೋನನು ಬಾಳನ ಬಲಿಪೀಠವನ್ನು ಕೆಡವಿದ ಕಾರಣ ಅವರು ಆ ದಿವಸದಲ್ಲಿ, “ಬಾಳನೇ ವ್ಯಾಜ್ಯವಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.


ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವಮನ ಮಗ ಬಾರಾಕನನ್ನು ಕರೆಯಿಸಿ ಅವನಿಗೆ, “ಇಸ್ರಾಯೇಲ್ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದೇನೆಂದರೆ, ‘ನೀನು ನಫ್ತಾಲಿಯರಲ್ಲಿಯು, ಜೆಬುಲೂನರಲ್ಲಿಯು ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ಯೆಹೋವ ದೇವರು ಅವನನ್ನು ದೃಷ್ಟಿಸಿ ನೋಡಿ, “ನಿನಗಿರುವ ಈ ಶಕ್ತಿಯಲ್ಲಿ ಹೋಗು, ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸುವೆ; ನಾನು ನಿನ್ನನ್ನು ಕಳುಹಿಸಲಿಲ್ಲವೋ?” ಎಂದರು.


ಫಿಲಿಷ್ಟಿಯರು ಸೋತುಹೋದುದರಿಂದ ಇಸ್ರಾಯೇಲಿನ ಮೇರೆಯಲ್ಲಿ ಬರಲೇ ಇಲ್ಲ. ಇದಲ್ಲದೆ ಸಮುಯೇಲನು ಇದ್ದ ದಿವಸಗಳೆಲ್ಲಾ ಯೆಹೋವ ದೇವರ ಕೈ ಫಿಲಿಷ್ಟಿಯರಿಗೆ ವಿರೋಧವಾಗಿತ್ತು.


ಗಿದ್ಯೋನನೆಂಬ ಯೆರುಬ್ಬಾಳನು ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ದಯೆಯನ್ನು ಅವನ ಮನೆಗೆ ಮಾಡದೆ ಹೋದರು.


ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.


ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ, “ನೀವು ಬಾಳನಿಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸುವಿರೋ? ಅವನಿಗಾಗಿ ವ್ಯಾಜ್ಯ ಮಾಡುವವನು ಈ ಉದಯಕಾಲದಲ್ಲೇ ಹತನಾಗಲಿ. ಅವನು ದೇವರಾದರೆ ತನ್ನ ಬಲಿಪೀಠವನ್ನು ಕೆಡವಿದ್ದರಿಂದ, ಅವನು ತನ್ನನ್ನು ರಕ್ಷಿಸಿಕೊಳ್ಳಲಿ” ಎಂದನು.


ಗಿದ್ಯೋನನೆಂಬ ಯೆರುಬ್ಬಾಳನೂ, ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು, ಹೆರೋದಿನ ಬಾವಿಯ ಬಳಿಯಲ್ಲಿ ದಂಡಿಳಿಸಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.


ಆಗ ಸಮುಯೇಲನು ಯೆಹೋವ ದೇವರ ಪ್ರವಾದಿಯಾಗಿ ದೃಢಪಟ್ಟನೆಂದು ದಾನ್ ಊರು ಮೊದಲ್ಗೊಂಡು ಬೇರ್ಷೆಬದವರೆಗೂ ಇದ್ದ ಇಸ್ರಾಯೇಲರೆಲ್ಲರು ತಿಳಿದಿದ್ದರು.


ಯೆಹೋವ ದೇವರು ಇಸ್ರಾಯೇಲರಿಗೆ ಒಬ್ಬ ವಿಮೋಚಕನನ್ನು ಕೊಟ್ಟಿದ್ದರಿಂದ, ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಆಗ ಇಸ್ರಾಯೇಲರು ಮುಂಚಿನ ಹಾಗೆ ತಮ್ಮ ಮನೆಗಳಲ್ಲಿ ವಾಸವಾಗಿದ್ದರು.


ಊಲಾಮ್ ಮಗನು ಬೆದಾನ್. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗ ಗಿಲ್ಯಾದನ ಪುತ್ರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು