1 ಸಮುಯೇಲ 12:14 - ಕನ್ನಡ ಸಮಕಾಲಿಕ ಅನುವಾದ14 ನೀವು ಯೆಹೋವ ದೇವರ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಯೆಹೋವ ದೇವರಿಗೆ ಭಯಪಟ್ಟು ಅವರನ್ನು ಸೇವಿಸಿ, ಅವರ ಮಾತಿಗೆ ವಿಧೇಯರಾದರೆ ನೀವೂ, ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಯೆಹೋವ ದೇವರನ್ನು ತಪ್ಪದೆ ಹಿಂಬಾಲಿಸುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಆತನಿಗೆ ವಿಧೇಯರಾಗಿ, ಆತನನ್ನು ಸೇವಿಸುತ್ತಾ, ತಪ್ಪದೆ ಆತನ ಮಾತನ್ನು ಪಾಲಿಸುವವರಾಗಿ, ಆತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೆ ವಿಧೇಯರಾಗಿ ಅವರನ್ನೇ ಪೂಜಿಸಿರಿ; ಅವರ ಮಾತನ್ನು ತಪ್ಪದೆ ಪಾಲಿಸುತ್ತಾ ಅವರನ್ನೇ ಹೊಂದಿಕೊಂಡಿರಿ. ಹೀಗೆ ಮಾಡಿದರೆ ಎಷ್ಟೋ ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ವಿಧೇಯರಾಗಿ ಆತನನ್ನು ಸೇವಿಸುತ್ತಾ ತಪ್ಪದೆ ಆತನ ಮಾತು ಕೇಳುವವರಾಗಿ ಆತನನ್ನೇ ಹೊಂದಿಕೊಂಡಿರುವದಾದರೆ ಎಷ್ಟೋ ಒಳ್ಳೇದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ನಿರಂತರವಾಗಿ ರಕ್ಷಿಸುತ್ತಾನೆ. ಆದರೆ ನೀವು ಈ ಕಾರ್ಯಗಳನ್ನು ಮಾಡಿದರೆ ಮಾತ್ರ ದೇವರು ನಿಮ್ಮನ್ನು ರಕ್ಷಿಸುತ್ತಾನೆ: ನೀವು ಯೆಹೋವನನ್ನು ಗೌರವಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನ ಆಜ್ಞೆಗಳನ್ನು ವಿರೋಧಿಸಬಾರದು. ನಿಮ್ಮ ದೇವರಾದ ಯೆಹೋವನ ಮಾರ್ಗವನ್ನು ನೀವು ಮತ್ತು ನಿಮ್ಮನ್ನು ಆಳುವ ರಾಜನು ಅನುಸರಿಸಬೇಕು. ನೀವು ಈ ಕಾರ್ಯಗಳನ್ನು ಮಾಡಿದಾಗ ದೇವರು ನಿಮ್ಮನ್ನು ರಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿ |
ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.