1 ಸಮುಯೇಲ 12:15 - ಕನ್ನಡ ಸಮಕಾಲಿಕ ಅನುವಾದ15 ನೀವು ಯೆಹೋವ ದೇವರ ಮಾತಿಗೆ ವಿಧೇಯರಾಗದಿದ್ದರೆ, ಯೆಹೋವ ದೇವರ ಆಜ್ಞೆಗೆ ವಿರೋಧವಾಗಿ ತಿರುಗಿಬಿದ್ದರೆ, ಯೆಹೋವ ದೇವರ ಹಸ್ತವು ನಿಮ್ಮ ಪಿತೃಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದರೆ ನೀವು ಸರ್ವೆಶ್ವರನ ಮಾತನ್ನು ಕೇಳದೆ, ಅವರ ಆಜ್ಞೆಗಳನ್ನು ಕೈಕೊಳ್ಳದೆ ನಡೆದರೆ, ಅವರ ಹಸ್ತ ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀವು ಯೆಹೋವನ ಮಾತನ್ನು ಕೇಳದೆಯೂ ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ನೀವು ಯೆಹೋವನಿಗೆ ವಿಧೇಯರಾಗಿ ನಡೆಯದಿದ್ದರೆ ಮತ್ತು ಆತನ ಆಜ್ಞೆಗಳನ್ನು ವಿರೋಧಿಸಿದರೆ, ಆತನು ನಿಮ್ಮ ಪೂರ್ವಿಕರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವನು. ಅಧ್ಯಾಯವನ್ನು ನೋಡಿ |