1 ಸಮುಯೇಲ 12:23 - ಕನ್ನಡ ಸಮಕಾಲಿಕ ಅನುವಾದ23 ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ, ಯೆಹೋವ ದೇವರಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ, ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ. ಅಧ್ಯಾಯವನ್ನು ನೋಡಿ |