Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:3 - ಕನ್ನಡ ಸಮಕಾಲಿಕ ಅನುವಾದ

3 ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ ಪೀಡಿಸಿದ್ದೂ ಲಂಚತೆಗೆದುಕೊಂಡು ಕುರುಡನಂತೆ ತೀರ್ಪುಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ ಅನ್ನಲು ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:3
29 ತಿಳಿವುಗಳ ಹೋಲಿಕೆ  

ನಾನು ಯಾರ ಬೆಳ್ಳಿ ಬಂಗಾರಕ್ಕಾಗಲಿ, ಬಟ್ಟೆಗಾಗಲಿ ಆಶೆಪಡಲಿಲ್ಲ.


ಆಗ ಮೋಶೆಯು ಬಹಳವಾಗಿ ಕೋಪಿಸಿಕೊಂಡು ಯೆಹೋವ ದೇವರಿಗೆ, “ಅವರ ಬಲಿಯನ್ನು ನೀವು ಗೌರವಿಸಬೇಡಿ, ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ. ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ,” ಎಂದು ಹೇಳಿದನು.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.


ದಾವೀದನು ತನ್ನ ಜನರಿಗೆ, “ಅವನು ಯೆಹೋವ ದೇವರ ಅಭಿಷಿಕ್ತನಾದದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ, ನನ್ನ ಒಡೆಯನಿಗೆ ಈ ಕಾರ್ಯ ಮಾಡುವುದನ್ನು ಯೆಹೋವ ದೇವರು ತಡೆಯಲಿ,” ಎಂದನು.


ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ನಂಬುವವರಾದ ನಿಮ್ಮೊಂದಿಗೆ ನಾವು ಎಷ್ಟೋ ಪವಿತ್ರರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿ.


ಆಗ ಅವನು ಅವರಿಗೆ, “ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬುದಕ್ಕೆ ಯೆಹೋವ ದೇವರೇ ನಿಮಗೆ ಸಾಕ್ಷಿಯಾಗಿದ್ದಾರೆ. ಅವರ ಅಭಿಷಿಕ್ತನು ಈ ಹೊತ್ತು ಸಾಕ್ಷಿಯಾಗಿದ್ದಾನೆ,” ಎಂದನು. ಅದಕ್ಕವರು, “ಸಾಕ್ಷಿಯಾಗಿದ್ದಾರೆ,” ಎಂದರು.


ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


“ಲಂಚವನ್ನು ತೆಗೆದುಕೊಳ್ಳಬಾರದು. ಏಕೆಂದರೆ ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ನಾವು ಎಂದಿಗೂ ನಿಮ್ಮನ್ನು ಹೊಗಳಿ ಮಾತನಾಡಲಿಲ್ಲ, ಕೌಶಲ್ಯವನ್ನು ಪ್ರಯೋಗಿಸಿ ಹಣದಾಸೆಯನ್ನು ಮರೆಮಾಡುವವರು ಆಗಿರಲಿಲ್ಲ ಎಂಬುದನ್ನು ನೀವು ತಿಳಿದಿರುವಿರಿ. ಇದಕ್ಕೆ ದೇವರೇ ಸಾಕ್ಷಿ.


ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”


ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಅದಕ್ಕೆ ಅವರು, “ಕೈಸರನದು,” ಎಂದರು. ಆಗ ಯೇಸು, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ,” ಎಂದರು.


ಅವನು ಪಾಪಮಾಡಿ, ಅಪರಾಧಿಯಾಗಿರುವುದರಿಂದ ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಇಲ್ಲವೆ ಅವನು ಮೋಸದಿಂದ ಪಡೆದ ವಸ್ತುವನ್ನೂ ಇಲ್ಲವೆ ಅವನ ವಶಕ್ಕೆ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ತಂದುಕೊಡಬೇಕು.


ಕಳ್ಳತನ ಮಾಡಿದ ಎತ್ತಾಗಲಿ, ಕತ್ತೆಯಾಗಲಿ, ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ಸಿಕ್ಕಿದರೆ ಅವನು ಎರಡರಷ್ಟು ಈಡು ಕೊಡಬೇಕು.


ಇಗೋ, ನಾನು ನಿಮ್ಮ ಬಳಿಗೆ ಬರುವುದಕ್ಕೆ ಸಿದ್ದನಾಗಿರುವುದು ಇದು ಮೂರನೆಯ ಸಾರಿ. ನಾನು ಬಂದಾಗ ನಿಮಗೆ ಭಾರವಾಗಲು ಬಿಡುವುದಿಲ್ಲ. ನಾನು ನಿಮ್ಮ ಸೊತ್ತನ್ನು ಆಶಿಸುವುದಿಲ್ಲ. ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ನಿಕ್ಷೇಪವನ್ನು ಕೂಡಿಸಿಡುವುದಿಲ್ಲ. ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುತ್ತಾರಷ್ಟೇ.


ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು.


ಅವರು, “ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ, ನೀನು ಯಾರ ಕೈಯಿಂದಲೂ ಏನೂ ತೆಗೆದುಕೊಳ್ಳಲಿಲ್ಲ,” ಎಂದರು.


ದುರಾಶೆಯುಳ್ಳವನು ತನ್ನ ಕುಟುಂಬವನ್ನು ಬಾಧಿಸುತ್ತಾನೆ. ಲಂಚವನ್ನು ಹಗೆಮಾಡುವವನು ಬದುಕುವನು.


ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ, ಪಡೆದವುಗಳೆಲ್ಲವುಗಳನ್ನೂ ಕೂಡಿಸಿ, ಹಿಂದಕ್ಕೆ ಕೊಡಬೇಕು. ಪ್ರಾಯಶ್ಚಿತ್ತದ ಬಲಿ ಅರ್ಪಿಸುವ ದಿನದಲ್ಲಿ, ಅದರ ಯಜಮಾನನು ಯಾವನಾಗಿರುವನೋ, ಅವನಿಗೆ ಕೊಡಬೇಕು.


ಹೀಗೆಯೇ ದಾವೀದನು ತನ್ನ ಜನರನ್ನು ಸೌಲನ ಮೇಲೆ ಬೀಳಗೊಡದೆ, ಈ ಮಾತುಗಳಿಂದ ಅವರನ್ನು ನಿಲ್ಲಿಸಿದನು. ಸೌಲನು ಎದ್ದು ಗವಿಯನ್ನು ಬಿಟ್ಟು, ಹೊರಗೆ ನಡೆದು ಹೋದನು.


ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.


ಆದರೆ ದಾವೀದನು ಅಬೀಷೈಯನಿಗೆ, “ಅವನನ್ನು ಸಂಹರಿಸಬೇಡ. ಏಕೆಂದರೆ ಅಪರಾಧವಿಲ್ಲದೆ ಯೆಹೋವ ದೇವರ ಅಭಿಷಿಕ್ತನ ವಿರೋಧವಾಗಿ ಕೈ ಹಾಕುವವನು ಯಾರು?” ಎಂದನು.


ನಾನು ನನ್ನ ಕೈಯನ್ನು ಯೆಹೋವ ದೇವರ ಅಭಿಷಿಕ್ತನ ಮೇಲೆ ಹಾಕದ ಹಾಗೆ ಯೆಹೋವ ದೇವರು ನನಗೆ ತಡೆಯಲಿ. ಈಗ ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೋ ನಾವು ಹೋಗೋಣ,” ಎಂದನು.


ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಅನುಸರಿಸಿದ್ದೇನೆ, ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.


ಅವರ ಹೊಲ, ದ್ರಾಕ್ಷಿತೋಟ, ಓಲಿವ್ ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟು ಬಿಡಿ; ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿ ಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ.


ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು