1 ಸಮುಯೇಲ 12:5 - ಕನ್ನಡ ಸಮಕಾಲಿಕ ಅನುವಾದ5 ಆಗ ಅವನು ಅವರಿಗೆ, “ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬುದಕ್ಕೆ ಯೆಹೋವ ದೇವರೇ ನಿಮಗೆ ಸಾಕ್ಷಿಯಾಗಿದ್ದಾರೆ. ಅವರ ಅಭಿಷಿಕ್ತನು ಈ ಹೊತ್ತು ಸಾಕ್ಷಿಯಾಗಿದ್ದಾನೆ,” ಎಂದನು. ಅದಕ್ಕವರು, “ಸಾಕ್ಷಿಯಾಗಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸಮುವೇಲನು ಪುನಃ “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲ ಎಂಬುದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ” ಎಂದನು. ಅವರು, “ಹೌದು, ಯೆಹೋವನೇ ಸಾಕ್ಷಿಯಾಗಿದ್ದಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಮುವೇಲನು ಪುನಃ, “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬುದಕ್ಕೆ ಸರ್ವೇಶ್ವರ ಹಾಗು ಅವರ ಅಭಿಷಿಕ್ತನು ಸಾಕ್ಷಿಯಾಗಿದ್ದಾರೆ,” ಎಂದನು. ಅವರು, “ಹೌದು, ಸರ್ವೇಶ್ವರ ಸಾಕ್ಷಿ ಆಗಿದ್ದಾರೆ,” ಎಂದು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸಮುವೇಲನು ತಿರಿಗಿ - ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ ಎನ್ನಲು ಅವರು - ಹೌದು, ಸಾಕ್ಷಿಯಾಗಿದ್ದಾರೆ ಎಂದು ನುಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸಮುವೇಲನು ಇಸ್ರೇಲರಿಗೆ, “ನಿಮ್ಮ ಮಾತುಗಳಿಗೆಲ್ಲ ಯೆಹೋವನೇ ಸಾಕ್ಷಿ. ಯೆಹೋವನಿಂದ ಆಯ್ಕೆಯಾದ ರಾಜನೂ ಈ ದಿನ ಸಾಕ್ಷಿಯಾಗಿದ್ದಾನೆ. ನೀವು ನನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲವೆನ್ನುವುದಕ್ಕೆ ಈ ಇಬ್ಬರು ಸಾಕ್ಷಿಗಳಾಗಿದ್ದಾರೆ” ಎಂದು ಹೇಳಿದನು. ಜನರು, “ಹೌದು, ಯೆಹೋವನೇ ಸಾಕ್ಷಿ” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿ |