Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 12:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಸಮುಯೇಲನು ಜನರಿಗೆ, “ಮೋಶೆಯನ್ನೂ, ಆರೋನನನ್ನೂ ಮುಂದಕ್ಕೆ ತಂದವರೂ, ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರೇ ಇದಕ್ಕೆ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಸಮುವೇಲನು, “ನಿಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರೆತರುವುದಕ್ಕಾಗಿ ಮೋಶೆ ಹಾಗೂ ಆರೋನರನ್ನು ನೇಮಿಸಿದ ಯೆಹೋವನೇ ಇದಕ್ಕೆ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಸಮುವೇಲನು, “ನಿಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತರುವುದಕ್ಕಾಗಿ ಮೋಶೆ ಹಾಗು ಆರೋನರನ್ನು ನೇಮಿಸಿದ ಸರ್ವೇಶ್ವರಸ್ವಾಮಿಯೇ ಇದಕ್ಕೆ ಸಾಕ್ಷಿ: ಇಲ್ಲಿ ನಿಂತುಕೊಳ್ಳಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಸಮುವೇಲನು - ನಿಮ್ಮ ಪಿತೃಗಳನ್ನು ಐಗುಪ್ತದಿಂದ ಕರತರುವದಕ್ಕಾಗಿ ಮೋಶೆ ಆರೋನರನ್ನು ಏರ್ಪಡಿಸಿದ ಯೆಹೋವನೇ ಇದಕ್ಕೆ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಸಮುವೇಲನು ಜನರಿಗೆ, “ಯೆಹೋವನೇ ಸಾಕ್ಷಿ. ಯೆಹೋವನು, ಮೋಶೆ ಆರೋನರನ್ನು ಆರಿಸಿಕೊಂಡನು. ಆತನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 12:6
11 ತಿಳಿವುಗಳ ಹೋಲಿಕೆ  

ನಾನು ಈಜಿಪ್ಟ್ ದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸತ್ವದ ದೇಶದೊಳಗಿಂದ ನಿನ್ನನ್ನು ವಿಮೋಚಿಸಿ, ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ಆರೋನ್, ಮೋಶೆ ಇವರಿಗೆ, “ಇಸ್ರಾಯೇಲರನ್ನು ಅವರವರ ಗೋತ್ರಗಳಿಗನುಸಾರವಾಗಿ ಈಜಿಪ್ಟಿನ ಒಳಗಿಂದ ಹೊರಗೆ ಬರಮಾಡಬೇಕು,” ಎಂದು ಯೆಹೋವ ದೇವರು ಹೇಳಿದ್ದರು.


ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.


ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. ಇವರೆಲ್ಲರೂ ಯೆಹೋವ ದೇವರನ್ನು ಕರೆದರು. ದೇವರು ಅವರಿಗೆ ಉತ್ತರಕೊಟ್ಟರು.


ಪ್ರವಾದಿಯಿಂದ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಬರಮಾಡಿ, ಆ ಪ್ರವಾದಿಯಿಂದಲೇ ಆತನು ಅವರನ್ನು ಕಾಪಾಡಿದರು.


ದೇವರು ತಮ್ಮ ಸೇವಕ ಮೋಶೆಯನ್ನೂ, ಆಯ್ದುಕೊಂಡ ಆರೋನನನ್ನೂ ಕಳುಹಿಸಿದರು.


ಆದುದರಿಂದ ಮೋಶೆ, ಆರೋನರೂ ಇಸ್ರಾಯೇಲರನ್ನು ಹೊರಗೆ ತರುವುದಕ್ಕಾಗಿ ಈಜಿಪ್ಟಿನ ಅರಸನಾದ ಫರೋಹನ ಸಂಗಡ ಮಾತನಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು