1 ಸಮುಯೇಲ 12:9 - ಕನ್ನಡ ಸಮಕಾಲಿಕ ಅನುವಾದ9 “ಆದರೆ ಅವರು ತಮ್ಮ ದೇವರಾದ ಯೆಹೋವ ದೇವರನ್ನು ಮರೆತು ಹೋದಾಗ, ದೇವರು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಧಿಪತಿಯಾದ ಸೀಸೆರನಿಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರು ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಆಗ ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್ ರಾಜನಿಗೂ ಮಾರಿಬಿಡಲಾಯಿತು. ಇವರು ದಂಡೆತ್ತಿ ಬಂದು ಅವರೊಡನೆ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಡಲು ಆತನು ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್‍ರಾಜನಿಗೂ ಮಾರಿಬಿಟ್ಟನು. ಇವರು ಬಂದು ಅವರೊಡನೆ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಆದರೆ ನಿಮ್ಮ ಪೂರ್ವಿಕರು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟದ್ದರಿಂದ ಆತನು ಅವರನ್ನು ಸೀಸೆರನ ಗುಲಾಮರಾಗಲು ಬಿಟ್ಟುಬಿಟ್ಟನು. ಸೀಸೆರನು ಹಾಚೋರಿನ ಸೈನ್ಯಾಧಿಪತಿ. ನಂತರ ಯೆಹೋವನು ಅವರನ್ನು ಫಿಲಿಷ್ಟಿಯರ ಮತ್ತು ಮೋವಾಬ್ ರಾಜನ ಗುಲಾಮರಾಗುವಂತೆ ಬಿಟ್ಟುಬಿಟ್ಟನು. ಅವರೆಲ್ಲರು ನಿಮ್ಮ ವಂಶದವರ ವಿರುದ್ಧ ಹೋರಾಡಿದರು. ಅಧ್ಯಾಯವನ್ನು ನೋಡಿ |
ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ಆ ದಿವಸದಿಂದ ಈಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಮೇಲೆ ಕುಗ್ಗಿಸದೆ ಇರುವರು. “ ‘ನಿನ್ನನ್ನು, ನಿನ್ನ ಸಮಸ್ತ ಶತ್ರುಗಳಿಂದ ತಪ್ಪಿಸಿ, ನಿನಗೆ ವಿಶ್ರಾಂತಿಯನ್ನು ಉಂಟುಮಾಡುವೆನು. ಇದಲ್ಲದೆ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ, ನಾನು ನಿನ್ನ ರಾಜವಂಶವನ್ನು ಸ್ಥಿರಪಡಿಸುವೆನು.