1 ಸಮುಯೇಲ 13:12 - ಕನ್ನಡ ಸಮಕಾಲಿಕ ಅನುವಾದ12 ಆಗ ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ದಾಳಿಮಾಡುವುದು ಖಚಿತ ಮತ್ತು ನಾನು ಎಂದಿಗೂ ಯೆಹೋವ ದೇವರ ಸಹಾಯವನ್ನು ಕೇಳಲಿಲ್ಲ.’ ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ದಹನಬಲಿಯನ್ನು ಅರ್ಪಿಸಿದೆನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ನಾನು ‘ಫಿಲಿಷ್ಟಿಯರು ಗಿಲ್ಗಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ’ ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಯನ್ನು ಸಲ್ಲಿಸುವುದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟೆ. ಆದುದರಿಂದ ದಹನಬಲಿಯನ್ನು ಸಮರ್ಪಿಸುವುದಕ್ಕೆ ನಾನೇ ಮುಂದಾದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ಯೆಹೋವನಿಗೆ ಶಾಂತ್ಯರ್ಪಣೆಯನ್ನು ಸಲ್ಲಿಸುವದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವದಕ್ಕೆ ಮುಂಗೊಂಡೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಇಲ್ಲಿಗೆ ಬಂದು ಗಿಲ್ಗಾಲಿನಲ್ಲಿ ನನ್ನ ಮೇಲೆ ಆಕ್ರಮಣ ಮಾಡುತ್ತಾರೆ. ನಮಗೆ ಸಹಾಯ ಮಾಡುವಂತೆ ನಾನು ದೇವರಲ್ಲಿ ಇನ್ನೂ ಪ್ರಾರ್ಥಿಸಿಲ್ಲ. ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ಸರ್ವಾಂಗಹೋಮವನ್ನು ಅರ್ಪಿಸಿದೆನು’” ಎಂದನು. ಅಧ್ಯಾಯವನ್ನು ನೋಡಿ |