Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:13 - ಕನ್ನಡ ಸಮಕಾಲಿಕ ಅನುವಾದ

13 ಸಮುಯೇಲನು ಸೌಲನಿಗೆ, “ನೀನು ಬುದ್ಧಿಹೀನವಾದ ಕೆಲಸಮಾಡಿದ್ದೀ; ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಯೆಹೋವ ದೇವರು ಇಸ್ರಾಯೇಲರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವುದಕ್ಕೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಸಮುವೇಲನು, “ನೀನು ಬುದ್ಧಿಹೀನ ಕಾರ್ಯವನ್ನು ಮಾಡಿದೆ; ನಿನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಕೈಗೊಂಡಿದ್ದರೆ ನಿನ್ನ ರಾಜ್ಯವನ್ನು ಇಸ್ರಯೇಲರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಸಮುವೇಲನು - ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಮುವೇಲನು, “ನೀನು ಬುದ್ಧಿಹೀನಕೃತ್ಯವನ್ನು ಮಾಡಿದೆ. ನಿನ್ನ ದೇವರಾದ ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಿದ್ದರೆ, ನಿನ್ನ ಕುಟುಂಬವು ಇಸ್ರೇಲನ್ನು ಶಾಶ್ವತವಾಗಿ ಆಳುವಂತೆ ಯೆಹೋವನು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:13
23 ತಿಳಿವುಗಳ ಹೋಲಿಕೆ  

ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ಸಮುಯೇಲನು ಅವನಿಗೆ, “ನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಯೆಹೋವ ದೇವರು ಈ ಹೊತ್ತು ಕಿತ್ತು, ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟರು.


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ,


ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು.


ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.


ದೇವರು ಅರಸನಿಗೆ, ‘ನೀನು ಮೂರ್ಖ,’ ಎಂದು ಹೇಳಬಲ್ಲರು. ದೇವರು ಪ್ರಧಾನರಿಗೆ, ‘ನೀವು ದುಷ್ಟರು’ ಎಂದು ಕರೆಯಬಲ್ಲರು ಅಲ್ಲವೇ?


ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.


ಹನ್ನಳು ಹೋಗದೆ ತನ್ನ ಗಂಡನಿಗೆ, “ಮಗುವು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ನಾನು ಬರುವುದಿಲ್ಲ. ಅವನು ಯೆಹೋವ ದೇವರ ಸನ್ನಿಧಿಯ ದರ್ಶನಕ್ಕೂ ಅಲ್ಲಿ ಎಂದೆಂದಿಗೂ ಇರುವುದಕ್ಕೂ ನಾನು ಅವನನ್ನು ಆಮೇಲೆ ತೆಗೆದುಕೊಂಡು ಬರುವೆನು,” ಎಂದಳು.


ಆಗ ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ದಾಳಿಮಾಡುವುದು ಖಚಿತ ಮತ್ತು ನಾನು ಎಂದಿಗೂ ಯೆಹೋವ ದೇವರ ಸಹಾಯವನ್ನು ಕೇಳಲಿಲ್ಲ.’ ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ದಹನಬಲಿಯನ್ನು ಅರ್ಪಿಸಿದೆನು,” ಎಂದನು.


ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು.


ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.


ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,


ಆಗ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರ ಯೆಹೋವ ದೇವರ ವಾಕ್ಯವನ್ನು ಕೇಳು.


ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ, ನಾನು ಅದಕ್ಕೆ ಉಪಕಾರ ಮಾಡುತ್ತೇನೆಂದು ಹೇಳಿದ ಒಳ್ಳೆಯದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.


ಆದರೆ ನೀನು ನನ್ನ ಮೊಮ್ಮಕ್ಕಳಿಗೂ, ನನ್ನ ಹೆಣ್ಣು ಮಕ್ಕಳಿಗೂ ಮುದ್ದು ಕೊಡುವುದಕ್ಕೂ ಬಿಡಲಿಲ್ಲ. ನೀನು ಮಾಡಿದ್ದು ಬುದ್ಧಿಹೀನ ಕೆಲಸವೇ ಸರಿ.


ಆಗ ಸೌಲನು, “ನಾನು ಪಾಪಮಾಡಿದೆನು. ನನ್ನ ಮಗನಾದ ದಾವೀದನೇ ತಿರುಗಿ ಬಾ. ಏಕೆಂದರೆ ನನ್ನ ಪ್ರಾಣ ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡು ಮಾಡೆನು. ಇದುವರೆಗೆ ನಾನು ಮಾಡಿದ್ದು ಹುಚ್ಚುತನವೂ, ದೊಡ್ಡ ತಪ್ಪೂ ಆಗಿದೆ,” ಎಂದನು.


ತನ್ನ ಜ್ಞಾನಕ್ಕನುಸಾರವಾಗಿ ಮನುಷ್ಯನು ಗೌರವ ಹೊಂದುವನು; ವಕ್ರಹೃದಯವುಳ್ಳವನು ಕಡೆಗಣಿಸಲಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು