Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:18 - ಕನ್ನಡ ಸಮಕಾಲಿಕ ಅನುವಾದ

18 ಮತ್ತೊಂದು ಗುಂಪು ಬೇತ್ ಹೋರೋನಿನ ಮಾರ್ಗವಾಗಿ ಹೋಯಿತು. ಬೇರೊಂದು ಗುಂಪು ಮರುಭೂಮಿಗೆ ಎದುರಾಗಿರುವ ಜೆಬೋಯಿಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇನ್ನೊಂದು ಗುಂಪು ಬೇತ್‌ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇನ್ನೊಂದು ಬೇತ್‍ಹೋರೋನಿನ ಕಡೆಗೆ, ಮತ್ತೊಂದು ಜೆಬೋಯೀಮ್ ಕಣಿವೆಯೂ ಅದರ ಕೆಳಗಿರುವ ಅರಣ್ಯವೂ ಕಾಣಿಸುವ ಸ್ಥಳಕ್ಕೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇನ್ನೊಂದು ಬೇತ್‍ಹೋರೋನಿನ ಕಡೆಗೂ ಮತ್ತೊಂದು ಜೆಬೋಯೀಮ್ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎರಡನೆ ಗುಂಪು ಈಶಾನ್ಯ ದಿಕ್ಕಿನ ಮಾರ್ಗವಾಗಿ ಬೇತ್‌ಹೋರೋನಿನ ಕಡೆಗೆ ಹೊರಟಿತು. ಆ ಮೂರನೆಯ ಗುಂಪು ಪೂರ್ವದಿಕ್ಕಿನ ಗಡಿಪ್ರದೇಶದ ಕಡೆಗೆ ಹೊರಟಿತು. ಆ ರಸ್ತೆಯು ಜೆಬೋಯೀಮ್ ಕಣಿವೆಯ ಮರುಭೂಮಿಯ ಕಡೆಗೆ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:18
12 ತಿಳಿವುಗಳ ಹೋಲಿಕೆ  

ಹಾದೀದ್, ಚೆಬೋಯಿಮ್, ನೆಬಲ್ಲಾಟ್,


ಪಶ್ಚಿಮಕ್ಕೆ ಯಫ್ಲೇಟ್ಯರ ಮೇರೆಗೂ ಕೆಳಗಡೆಯಾದ ಬೇತ್ ಹೋರೋನ್ ಮೇರೆಯವರೆಗೂ ಅಲ್ಲಿಂದ ಗೆಜೆರಿನವರೆಗೂ ಹೋಗಿ ಮೆಡಿಟೆರಿಯನ್ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ಇವುಗಳಲ್ಲದೆ, ಮೇಲಿನ ಬೇತ್ ಹೋರೋನ್ ಮತ್ತು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನು ಪುನಃ ನಿರ್ಮಿಸಿದನು. ಈ ಪಟ್ಟಣಗಳು ಬಲವಾದ ಗೋಡೆಗಳು, ಬಾಗಿಲುಗಳು ಮತ್ತು ಅಗುಳಿಗಳು ಉಳ್ಳ ಕೋಟೆ ಪಟ್ಟಣಗಳಾಗಿ ಸೊಲೊಮೋನನು ಕಟ್ಟಿಸಿದನು.


ಯೊಕ್ಮೆಯಾಮನ್ನೂ, ಬೇತ್ ಹೋರೋನ್,


ಅವರ ಕುಟುಂಬಗಳ ಪ್ರಕಾರ ಎಫ್ರಾಯೀಮ್ ಗೋತ್ರದ ಪ್ರದೇಶ ಹೀಗಿತ್ತು: ಪೂರ್ವದಿಕ್ಕಿನ ಅಟಾರೋತ್ ಅದ್ದಾರಿನಿಂದ ಪ್ರಾರಂಭಿಸಿ, ಮೇಲಿನ ಬೇತ್ ಹೋರೋನಿನವರೆಗೂ ಇತ್ತು.


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ಇವರು ಸೊದೋಮಿನ ಅರಸ ಬೆರಗನೂ ಗೊಮೋರದ ಅರಸ ಬಿರ್ಶಗನೂ ಅದ್ಮಾಹದ ಅರಸ ಶಿನಾಬನಿಗೂ ಚೆಬೋಯಿಮಿನ ಅರಸ ಶೆಮೇಬರನಿಗೂ ಬೆಲಗಿನ ಅಂದರೆ, ಚೋಗರದ ಅರಸನಿಗೂ ವಿರೋಧವಾಗಿ ಯುದ್ಧಮಾಡಿದರು.


ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು.


ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.


ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು