Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:3 - ಕನ್ನಡ ಸಮಕಾಲಿಕ ಅನುವಾದ

3 ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ತಿಳಿದುಬಂತು. ಆದ್ದರಿಂದ ಸೌಲನು ದೇಶದಲ್ಲೆಲ್ಲಾ ಹಿಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದನು. ಈ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಹಿಬ್ರಿಯರೆಲ್ಲರಿಗೂ ಇದು ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೇರೆ ಇಸ್ರಾಯೇಲ್ಯರನ್ನು ಅವರವರ ಮನೆಗಳಿಗೆ ಕಳುಹಿಸಿದನು. ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಠಾಣವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಈ ಸಂಗತಿಯು ಎಲ್ಲಾ ಇಬ್ರಿಯರಿಗೂ ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋನಾತಾನನು ಫಿಲಿಷ್ಟಿಯರನ್ನು ಅವರ ಶಿಬಿರವಿದ್ದ ಗೆಬದಲ್ಲಿ ಸೋಲಿಸಿದನು. ಫಿಲಿಷ್ಟಿಯರು ಈ ವಿಚಾರವನ್ನು ಕೇಳಿ, “ಇಬ್ರಿಯರು ದಂಗೆ ಎದ್ದಿದ್ದಾರೆ” ಎಂದು ಹೇಳಿದರು. ಸೌಲನು, “ಏನು ನಡೆಯಿತೆಂಬುದು ಇಬ್ರಿಯರಿಗೆ ತಿಳಿಯಲಿ” ಎಂದು ಹೇಳಿದನು. ಆದ್ದರಿಂದ ಸೌಲನು ಇಸ್ರೇಲ್ ದೇಶದಲ್ಲೆಲ್ಲಾ ಕೊಂಬೂದಿಸಬೇಕೆಂದು ಜನರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:3
12 ತಿಳಿವುಗಳ ಹೋಲಿಕೆ  

“ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.


ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.


ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು.


ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು.


ಅವರು ಕಣಿವೆಯನ್ನು ದಾಟಿದ್ದಾರೆ; ಗಿಬೆಯದಲ್ಲಿ ಇಳುಕೊಂಡಿದ್ದಾರೆ. ರಾಮಾ ಜನತೆ ಹೆದರುತ್ತಿದೆ; ಸೌಲನ ಗಿಬೆಯದ ಜನತೆ ಓಡಿಹೋಗಿದೆ.


ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.


ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”


ಹೀಗೆ ಯೋವಾಬನು ತುತೂರಿಯನ್ನು ಊದಿದನು. ಆಗ ಸೈನಿಕರೆಲ್ಲರೂ ನಿಂತರು. ಇಸ್ರಾಯೇಲರನ್ನು ಪುನಃ ಹಿಂದಟ್ಟಲಿಲ್ಲ, ಯುದ್ಧವು ನಿಂತಿತು.


ಸೌಲನೂ, ಅವನ ಮಗ ಯೋನಾತಾನನೂ, ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾಮೀನ್ಯರ ಗಿಬೆಯದಲ್ಲಿ ಇದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.


ಇದಲ್ಲದೆ ಬೆನ್ಯಾಮೀನನ ಗೋತ್ರದಲ್ಲಿ ಗಿಬ್ಯೋನನ್ನೂ ಗೆಬಾನನ್ನೂ


ಕೆಫೆರ್ ಅಮ್ಮೋನಿ, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಆಗಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು