Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:4 - ಕನ್ನಡ ಸಮಕಾಲಿಕ ಅನುವಾದ

4 “ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ಸೌಲನು ನಾಶಮಾಡಿದ್ದರಿಂದ, ಇಸ್ರಾಯೇಲರು ಈಗ ಫಿಲಿಷ್ಟಿಯರಿಗೆ ಅಸಹ್ಯಕರ ಶತ್ರುವಾದರು,” ಎಂಬ ವರ್ತಮಾನವನ್ನು ಸಮಸ್ತ ಇಸ್ರಾಯೇಲರು ಕೇಳಿದರು. ಮತ್ತು ಗಿಲ್ಗಾಲಿಗೆ ಬಂದು ಸೌಲನನ್ನು ಸೇರಿಕೊಳ್ಳಲು ಜನರನ್ನು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೌಲನು ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದ್ದರಿಂದ, ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಯೇಲರು ತಿಳಿದು, ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸೌಲನು ಫಿಲಿಷ್ಟಿಯರ ಠಾಣವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲ್ಯರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲರೆಲ್ಲರೂ ಈ ಸುದ್ದಿಯನ್ನು ಕೇಳಿ, “ಸೌಲನು ಫಿಲಿಷ್ಟಿಯರ ನಾಯಕನನ್ನು ಕೊಂದನು. ಈಗ ಫಿಲಿಷ್ಟಿಯರು ಇಸ್ರೇಲರನ್ನು ನಿಜವಾಗಿಯೂ ದ್ವೇಷಿಸುತ್ತಾರೆ” ಎಂದು ಹೇಳಿದರು. ಇಸ್ರೇಲರೆಲ್ಲ ಗಿಲ್ಗಾಲಿನಲ್ಲಿ ಸೌಲನನ್ನು ಜೊತೆಸೇರಲು ಕರೆಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:4
9 ತಿಳಿವುಗಳ ಹೋಲಿಕೆ  

ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.


ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು.


ಇದಲ್ಲದೆ, ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು. ಮಂದೆಯು ನನ್ನನ್ನು ಅಸಹ್ಯಪಡಿಸಿತು, ಮತ್ತು ಅವುಗಳಿಂದ ನನಗೆ ಬೇಸರವಾಯಿತು.


“ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದು ಹೋಗಬೇಕು. ನಾನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು,” ಎಂದನು.


ಆಗ ಯೆಹೋವ ದೇವರು ಯೆಹೋಶುವನಿಗೆ, “ಈ ದಿನ ಈಜಿಪ್ಟಿನ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದರು. ಆದ್ದರಿಂದ ಆ ಸ್ಥಳವು ಇಂದಿನವರೆಗೂ ಗಿಲ್ಗಾಲ್ ಎಂದು ಕರೆಯಲಾಗಿದೆ.


ನೀವು ಅವನಿಗೆ, ‘ಚಿಕ್ಕಂದಿನಿಂದ ಇಂದಿನವರೆಗೂ ನಿನ್ನ ದಾಸರಾದ ನಾವೂ ನಮ್ಮ ಪೂರ್ವಿಕರೂ ಪಶುಗಳನ್ನು ಕಾಯುವವರಾಗಿದ್ದೇವೆ,’ ಎಂದು ಹೇಳಬೇಕು. ಏಕೆಂದರೆ ಕುರಿ ಕಾಯುವವರೆಲ್ಲಾ ಈಜಿಪ್ಟಿನವರಿಗೆ ಅಸಹ್ಯವಾಗಿದ್ದರಿಂದ, ನೀವು ಗೋಷೆನ್ ಪ್ರಾಂತದಲ್ಲಿ ವಾಸವಾಗಿರುವಂತೆ ನೇಮಿಸುವನು,” ಎಂದನು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.


ಆಕೀಷನು ದಾವೀದನನ್ನು ನಂಬಿ, “ಇವನು ತನ್ನ ಜನರಾದ ಇಸ್ರಾಯೇಲರಿಗೆ ಅಸಹ್ಯವಾದನು, ಆದ್ದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿರುವನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು