Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಇಸ್ರಾಯೇಲರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ, ಆರು ಸಾವಿರ ಕುದುರೆ ಸವಾರರೂ, ಸಮುದ್ರತೀರದ ಮರಳಷ್ಟು ಜನರೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಮೂವತ್ತು ಸಾವಿರ ರಥಬಲವನ್ನು, ಆರು ಸಾವಿರ ಅಶ್ವಬಲವನ್ನು ಹಾಗು ಸಮುದ್ರದ ಮರಳಿನಂತೆ ಅಸಂಖ್ಯವಾದ ಕಾಲಾಳುಗಳನ್ನು ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ ಆರು ಸಾವಿರ ಅಶ್ವಬಲವನ್ನೂ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲ್ಬಲವನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ವಿುಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಒಟ್ಟುಗೂಡಿದರು. ಫಿಲಿಷ್ಟಿಯರಲ್ಲಿ ಮೂರು ಸಾವಿರ ರಥಗಳಿದ್ದವು; ಆರು ಸಾವಿರ ಅಶ್ವಸೈನಿಕರಿದ್ದರು. ಫಿಲಿಷ್ಟಿಯರಲ್ಲಿ ನದಿದಂಡೆಯ ಮರಳಿನ ಕಣಗಳಷ್ಟು ಯೋಧರಿದ್ದರು. ಫಿಲಿಷ್ಟಿಯರು ಬೇತಾವೆನಿನ ಪೂರ್ವ ದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:5
21 ತಿಳಿವುಗಳ ಹೋಲಿಕೆ  

ಹೀಗೆ ಯೆಹೋವ ದೇವರು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದರು. ಆ ಯುದ್ಧವು ಬೇತಾವೆನಿನವರೆಗೂ ನಡೆಯಿತು.


ಅವರೆಲ್ಲರು ಸಮುದ್ರ ದಡದ ಮರಳಿನ ಹಾಗೆ ಅಸಂಖ್ಯರಾಗಿದ್ದರು. ಅವರು ಬಹು ರಥಗಳೂ ಕುದುರೆಗಳೂ ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.


ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆನ ಮರುಭೂಮಿಗೆ ಮುಗಿಯುವುದು.


ಬೇತಾವೆನಿನ ಬಸವ ವಿಗ್ರಹಕ್ಕೆ ಸಮಾರ್ಯದ ನಿವಾಸಿಗಳು ಭಯಪಡುವರು. ಅದರಲ್ಲಿ ಆನಂದಿಸಿದ ಜನರು ಅದಕ್ಕೋಸ್ಕರ ಗೋಳಾಡುವರು. ಅದರ ಯಾಜಕರು ನಡುಗುವರು. ಏಕೆಂದರೆ ಅದರ ವೈಭವವು ಅದರಿಂದ ಕುಂದಿಹೋಯಿತು.


“ಗಿಬೆಯದಲ್ಲಿ ತುತೂರಿಯನ್ನೂ ರಾಮದಲ್ಲಿ ಕೊಂಬನ್ನೂ ಊದಿರಿ. ಬೆನ್ಯಾಮೀನೇ, ನಿನ್ನ ಹಿಂದೆ ನೋಡು! ಬೇತಾವೆನಿನಲ್ಲಿ ಗಟ್ಟಿಯಾಗಿ ಕೂಗು.


“ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ, ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. “ಗಿಲ್ಗಾಲಿಗೆ ಹೋಗದೆ, ಇಲ್ಲವೆ ಬೇತಾವೆನಿಗೆ ಏರದೇ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡದೆ ಇರಲಿ.


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಕಿಗಿಂತ ಹೆಚ್ಚಾಗಿರುವರು, ಯುವಕರ ತಾಯಿಗಳ ಮೇಲೆ ನಾಶ ಮಾಡುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು, ಅವರ ಮೇಲೆ ಕಳವಳವನ್ನೂ, ದಿಗಿಲನ್ನೂ ತಟ್ಟನೆ ಬೀಳಿಸುವೆನು.


ನಿನ್ನ ಸಂತಾನವು ಸಹ ಮರಳಿನಂತೆಯೂ, ನಿನ್ನ ಮಕ್ಕಳು ಅಸಂಖ್ಯಾತ ಧಾನ್ಯಗಳಂತೆಯೂ ಇರುವರು. ಅವರ ಹೆಸರುಗಳು ನನ್ನ ಸಮ್ಮುಖದಿಂದ, ಅಳಿದುಹೋಗದೆ ಇರುವುದು.”


ಈಗ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವು ದೃಢವಾಗಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯಾತ ಜನರ ಮೇಲೆ ನನ್ನನ್ನು ಅರಸನನ್ನಾಗಿ ಮಾಡಿದ್ದೀರಿ.


ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಮಲಗಿದ್ದರು. ಅವರ ಒಂಟೆಗಳು ಸಮುದ್ರದ ಮರಳಿನ ಹಾಗೆ ಅಸಂಖ್ಯವಾಗಿದ್ದವು.


ಆಗ ಯೆಹೋಶುವನು ಕೆಲವರನ್ನು ಕರೆದು, “ನೀವು ದೇಶವನ್ನು ಸಂಚರಿಸಿ ಸುತ್ತಿ ನೋಡಿ ಬನ್ನಿರಿ,” ಎಂದು ಹೇಳಿ, ಯೆರಿಕೋವಿನಿಂದ ಜನರನ್ನು ಬೇತೇಲಿನ ಪೂರ್ವದಕಡೆ ಬೇತಾವೆನಿನ ಬಳಿಯಲ್ಲಿರುವ ಆಯಿ ಎಂಬ ಪಟ್ಟಣಕ್ಕೆ ಕಳುಹಿಸಿದನು. ಆಗ ಅವರು ಹೋಗಿ ಆಯಿ ಎಂಬ ಪಟ್ಟಣವನ್ನು ರಹಸ್ಯವಾಗಿ ನೋಡಿ ಬಂದರು.


ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.


ಫಿಲಿಷ್ಟಿಯರು ಸೋತುಹೋದುದರಿಂದ ಇಸ್ರಾಯೇಲಿನ ಮೇರೆಯಲ್ಲಿ ಬರಲೇ ಇಲ್ಲ. ಇದಲ್ಲದೆ ಸಮುಯೇಲನು ಇದ್ದ ದಿವಸಗಳೆಲ್ಲಾ ಯೆಹೋವ ದೇವರ ಕೈ ಫಿಲಿಷ್ಟಿಯರಿಗೆ ವಿರೋಧವಾಗಿತ್ತು.


ಸೌಲನು ಇಸ್ರಾಯೇಲರೊಳಗಿಂದ ಮೂರು ಸಾವಿರ ಜನ ಪುರುಷರನ್ನು ಆಯ್ದುಕೊಂಡನು. ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯು, ಬೇತೇಲಿನ ದಿನ್ನೆ ಪ್ರದೇಶಗಳಲ್ಲಿಯು ಇದ್ದರು. ಒಂದು ಸಾವಿರ ಜನರು ಬೆನ್ಯಾಮೀನ್ಯರ ಗಿಬೆಯದಲ್ಲಿ ಯೋನಾತಾನನ ಜೊತೆಗಿದ್ದರು. ಉಳಿದ ಜನರನ್ನು ಅವನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.


ಆದರೆ ಸಮುಯೇಲನು, “ನೀನೇನು ಮಾಡಿದಿ?” ಎಂದು ಸೌಲನನ್ನು ಕೇಳಿದನು. ಸೌಲನು, “ಸೈನಿಕರು ನನ್ನನ್ನು ಬಿಟ್ಟು ಹೋಗುತ್ತಿರುವುದನ್ನು, ನೀನು ನೇಮಿಸಿದ ದಿವಸಗಳ ಪ್ರಕಾರ ಬಾರದಿರುವುದನ್ನು ಮತ್ತು ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವುದನ್ನು ಕಂಡೆನು.


ಫಿಲಿಷ್ಟಿಯರು ಯುದ್ಧಮಾಡುವುದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋವಿನಲ್ಲಿ ಕೂಡಿಸಿದರು. ಅಜೇಕಕ್ಕೂ ಸೋಕೋವಿಗೂ ಮಧ್ಯದಲ್ಲಿರುವ ಎಫೆಸ ದಮ್ಮೀಮಿನಲ್ಲಿ ದಂಡಿಳಿದರು.


“ನಾನು ಹೇಳುವ ಆಲೋಚನೆ ಏನೆಂದರೆ, ದಾನಿನಿಂದ ಬೇರ್ಷೆಬದವರೆಗೂ ವಾಸವಾಗಿರುವ ಇಸ್ರಾಯೇಲರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ನಿನ್ನ ಬಳಿಯಲ್ಲಿ ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಆದ್ದರಿಂದ ಇಸ್ರಾಯೇಲರು ಲೆಕ್ಕ ಮಾಡಿ ಆಹಾರವನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲರು ಅವರಿಗೆದುರಾಗಿ ದಂಡಿಳಿದಿರುವಾಗ, ಅವರು ಆಡುಮರಿಗಳ ಎರಡು ಮಂದೆಗಳ ಹಾಗಿದ್ದರು. ಆದರೆ ಅರಾಮ್ಯರು ಮೈದಾನದಲ್ಲಿ ಸಂಪೂರ್ಣವಾಗಿ ಆವರಿಸಿದ್ದರು.


ಅವರು ಅಯ್ಯಾಥಿಗೆ ಬಂದರು. ಮಿಗ್ರೋನನ್ನು ಹಾದು ಹೋಗಿ, ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟಿದ್ದಾರೆ.


ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಘೋರ ಯುದ್ಧ ನಡೆಯುತ್ತಿತ್ತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ, ಧೈರ್ಯಶಾಲಿಯನ್ನಾದರೂ ಕಂಡರೆ, ಅಂಥವನನ್ನು ತನ್ನ ಸೈನ್ಯಕ್ಕೆ ಸೇರಿಸಿಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು