Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಸ್ರೇಲರು ತಾವು ತೊಂದರೆಗೆ ಒಳಗಾಗಿರುವುದನ್ನೂ ಇಕ್ಕಟ್ಟಿನಲ್ಲಿ ಸಿಕ್ಕಿಬಿದ್ದಿರುವುದನ್ನೂ ತಿಳಿದುಕೊಂಡರು. ಅವರು ಗವಿಗಳಲ್ಲಿ ಮತ್ತು ಬಂಡೆಗಲ್ಲುಗಳ ಸಂಧಿಗಳಲ್ಲಿ ಅಡಗಿಕೊಳ್ಳಲು ಓಡಿಹೋದರು. ಅವರು ಬಂಡೆಗಳ ಮಧ್ಯದಲ್ಲಿಯೂ ಬಾವಿಗಳಲ್ಲಿಯೂ ಮತ್ತು ನೆಲದ ಕುಳಿಗಳಲ್ಲಿಯೂ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:6
18 ತಿಳಿವುಗಳ ಹೋಲಿಕೆ  

ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.


ಭೂಮಿಯ ಕಾಡು, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇಂಥವರಿಗೆ ಈ ಲೋಕವು ಯೋಗ್ಯವಾದ ಸ್ಥಳವಲ್ಲ.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.


ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆ ಹೋಗಿದ್ದಾರೆ. ಅವರೆಲ್ಲರೂ ಹಳ್ಳಕೊಳ್ಳಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಸೆರೆಮನೆಗಳಲ್ಲಿ ಬಂಧಿಗಳಾಗಿದ್ದಾರೆ. ಅವರು ಸೂರೆಯಾದರೂ, ತಪ್ಪಿಸುವವನು ಒಬ್ಬನೂ ಇಲ್ಲ. ಕೊಳ್ಳೆಯಾದದ್ದನ್ನು, “ತಿರುಗಿ ಹಿಂದಕ್ಕೆ ಕೊಡು,” ಎಂದು ಹೇಳುವ ಒಬ್ಬನೂ ಇಲ್ಲ.


ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.


ಸೌಲನು ಮಾರ್ಗದಲ್ಲಿ ಕುರಿಹಟ್ಟಿಗಳು ಇರುವ ಗವಿಯ ಬಳಿಗೆ ಬಂದು, ಅದರಲ್ಲಿ ಅವನು ಶೌಚಕ್ಕಾಗಿ ಹೋದನು. ಆದರೆ ದಾವೀದನೂ, ಅವನ ಜನರೂ ಅದೇ ಗವಿಯ ಹಿಂದೆ ಅಡಗಿಕೊಂಡಿದ್ದರು.


ಆಗ ಜೀಫ್ಯರು ಗಿಬೆಯದಲ್ಲಿರುವ ಸೌಲನ ಬಳಿಗೆ ಬಂದು, “ದಾವೀದನು ನಮ್ಮ ಪಕ್ಷವಾಗಿಯೇ ಹೋರೆಷದ ಗಿರಿಗಳಲ್ಲಿ ಅಂದರೆ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದನಲ್ಲವೇ?


ಹಾಗೆಯೇ ಅವರಿಬ್ಬರೂ ತಾವು ಫಿಲಿಷ್ಟಿಯರ ಠಾಣ್ಯದವರೆಗೂ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರು, “ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಹಿಬ್ರಿಯರು ಹೊರಟು ಬರುತ್ತಾರೆ,” ಎಂದರು.


ಇಸ್ರಾಯೇಲರು ತಿರುಗಿಕೊಂಡು ಬಂದಾಗ, ಬೆನ್ಯಾಮೀನನ ಜನರು ತಲ್ಲಣಗೊಂಡರು, ಏಕೆಂದರೆ ಕೇಡು ತಮ್ಮ ಮೇಲೆ ಪ್ರಾಪ್ತವಾಯಿತೆಂದು ಕಂಡರು.


ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದ ಹಾಗೂ ಬೆನ್ಯಾಮೀನರಿಗೆ ವಿರೋಧವಾಗಿಯೂ, ಎಫ್ರಾಯೀಮರ ಮನೆಗೆ ವಿರೋಧವಾಗಿಯೂ ಯುದ್ಧಮಾಡುವುದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹು ಸಂಕಟವಾಯಿತು.


ಆಯಿ ಎಂಬ ಪಟ್ಟಣದ ಮನುಷ್ಯರು ಹಿಂದಕ್ಕೆ ತಿರುಗಿ ನೋಡಿದಾಗ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳುವುದನ್ನು ಕಂಡರು. ಹೇಗಾದರೂ ಓಡಿಹೋಗಲು ಅವರಿಗೆ ತ್ರಾಣ ಇಲ್ಲದೆ ಹೋಯಿತು. ಆಗ ಮರುಭೂಮಿಗೆ ಓಡಿ ಹೋದ ಇಸ್ರಾಯೇಲರು ಹಿಂದಟ್ಟಿದವರ ಕಡೆಗೆ ತಿರುಗಿದರು.


ಇಸ್ರಾಯೇಲರು ಮಿಚ್ಪೆಯಲ್ಲಿ ಕೂಡಿ ಬಂದರೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರ ಅಧಿಪತಿಗಳು ಇಸ್ರಾಯೇಲರಿಗೆ ವಿರೋಧವಾಗಿ ಏರಿ ಬಂದರು. ಆಗ ಇಸ್ರಾಯೇಲರು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು,


ಸಮುಯೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾಮೀನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ, ಅವರು ಸುಮಾರು ಆರುನೂರು ಜನರಿದ್ದರು.


ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯೀಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲರು ಕೇಳಿದಾಗ, ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದ್ದರು.


ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದುಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಬಾವಿಯು, ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ತೋಡಿಸಿದ್ದ ಬಾವಿಯೇ ಆಗಿತ್ತು. ಇದನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದು ಹಾಕಿದವರಿಂದ ತುಂಬಿಸಿದನು.


“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಖಡ್ಗದಿಂದ ಬೀಳುವರು. ಬಯಲಿನಲ್ಲಿರುವವರನ್ನು ಕಾಡುಮೃಗಗಳಿಗೆ ಆಹಾರವನ್ನಾಗಿ ಕೊಡುತ್ತೇನೆ. ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವವರು ವ್ಯಾಧಿಗಳಿಂದ ಸಾಯುವರು.


ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ, ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು