Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:7 - ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಹಿಬ್ರಿಯರಲ್ಲಿ ಕೆಲವರು ಯೊರ್ದನನ್ನು ದಾಟಿ, ಗಾದ್ ದೇಶಕ್ಕೂ, ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು. ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ, ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕೆಲವರು ಜೋರ್ಡನ್ ನದಿ ದಾಟಿ ಗಾದ್ಯರ ದೇಶಕ್ಕೂ ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ ಗಿಲ್ಯಾದ್ ಪ್ರಾಂತಕ್ಕೂ ಹೊರಟು ಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಬ್ರಿಯರಲ್ಲಿ ಕೆಲವರು ಜೋರ್ಡನ್ ನದಿಯನ್ನು ದಾಟಿ ಗಾದ್ ಮತ್ತು ಗಿಲ್ಯಾದ್ ಪ್ರದೇಶಕ್ಕೆ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸೈನ್ಯದಲ್ಲಿದ್ದ ಜನರೆಲ್ಲ ಭಯದಿಂದ ನಡುಗತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:7
15 ತಿಳಿವುಗಳ ಹೋಲಿಕೆ  

ಆದ್ದರಿಂದ ನೀನು ಹೋಗಿ ಜನರು ಕೇಳುವ ಹಾಗೆ, ‘ಯಾವನಿಗೆ ಭಯವೂ, ಹೆದರಿಕೆಯೂ ಉಂಟೋ ಅವನು ತಿರುಗಿ ತ್ವರೆಯಾಗಿ ಗಿಲ್ಯಾದ್ ಬೆಟ್ಟದಿಂದ ಹೋಗಲಿ,’ ಎಂದು ಪ್ರಕಟಮಾಡು,” ಎಂದರು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ಜನರು ತಿರುಗಿ ಹೋದರು; ನಂತರ ಹತ್ತು ಸಾವಿರ ಜನರು ಉಳಿದರು.


ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.


ಇದಲ್ಲದೆ ಅಧಿಕಾರಿಗಳು ಮಾತನಾಡಿ, “ಯಾವನಾದರೂ ಯುದ್ಧಕ್ಕೆ ಭಯಪಟ್ಟು ಅಂಜಿಕೊಂಡರೆ, ಅಂಥವನು ಮನೆಗೆ ಹೋಗಲಿ. ಅವನನ್ನು ನೋಡಿ ಬೇರೆಯವರೂ ಹೆದರಿಕೊಳ್ಳುವ ಅವಕಾಶವಿದೆ,” ಎಂದು ಹೇಳಬೇಕು.


ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ಹಳ್ಳದ ಸಮೀಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು, ಅರ್ಧ ಗಿಲ್ಯಾದ್ ಬೆಟ್ಟವನ್ನೂ, ಅದರ ಪಟ್ಟಣಗಳನ್ನೂ ರೂಬೇನ್ಯರ ಪ್ರದೇಶದವರೆಗೂ, ಗಾದನ ಪ್ರದೇಶದವರೆಗೂ ಕೊಟ್ಟೆನು.


ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.


ಸೌಲನು ತನಗೆ ಸಮುಯೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುಯೇಲನು ಗಿಲ್ಗಾಲಿಗೆ ಬಾರದೆ ಇದ್ದುದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.


ಮನಸ್ಸೆ ಕುಲದ ಉಳಿದ ಅರ್ಧ ಗೋತ್ರದವರೂ ರೂಬೇನ್ಯರೂ ಗಾದ್ಯರೂ ತಮ್ಮ ಸೊತ್ತನ್ನು ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಬೇಕೆಂದು ನಿರ್ಣಯಿಸಿದ ಸ್ಥಳಗಳು ಅವರಿಗೆ ಕೊಡಲಾದವು. ಅವುಗಳು ಯಾವುವೆಂದರೆ:


ಅದರೊಂದಿಗೆ ಗಿಲ್ಯಾದ್, ಗೆಷೂರ್ಯರ, ಮಾಕಾತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಸಲೆಕಾವರೆಗೆ ಇರುವ ಇಡೀ ಬಾಷಾನ್ ಪೂರ್ತಿಯಾಗಿ.


ಸೌಲನೂ, ಸಮಸ್ತ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಹೆದರಿಕೊಂಡು ಬಹು ಭಯಪಟ್ಟರು.


ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ, ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು