1 ಸಮುಯೇಲ 13:9 - ಕನ್ನಡ ಸಮಕಾಲಿಕ ಅನುವಾದ9 ಆಗ ಸೌಲನು, “ದಹನಬಲಿಯನ್ನೂ, ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಸೌಲನು ಜನರಿಂದ ದಹನಬಲಿಗೆ ಹಾಗು ಶಾಂತಿಸಮಾಧಾನ ಬಲಿಗೆ ಬೇಕಾದದ್ದನ್ನು ತರಿಸಿ ದಹನಬಲಿಯನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ ಸಮಾಧಾನಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದ್ದರಿಂದ ಸೌಲನು, “ಸರ್ವಾಂಗಹೋಮಕ್ಕೂ ಸಮಾಧಾನಯಜ್ಞಕ್ಕೂ ಬೇಕಾದವುಗಳನ್ನು ತನ್ನಿ” ಎಂದು ಹೇಳಿದನು. ಬಳಿಕ ಸೌಲನು ಸರ್ವಾಂಗಹೋಮವನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿ |
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.