1 ಸಮುಯೇಲ 14:1 - ಕನ್ನಡ ಸಮಕಾಲಿಕ ಅನುವಾದ1 ಆ ಕಾಲದಲ್ಲಿ, ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಯುವಕನಿಗೆ, “ನಾವು ನಮಗೆದುರಾಗಿರುವ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ,” ಎಂದನು. ಆದರೆ ತಂದೆಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಒಂದು ದಿನ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ” ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಒಂದು ದಿನ ಸೌಲನ ಮಗ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಆಚೆ ಇರುವ ಫಿಲಿಷ್ಟಿಯರ ಕಾವಲು ದಂಡಿಗೆ ವಿರೋಧವಾಗಿ ಹೋಗೋಣ ಬಾ,” ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಒಂದು ದಿವಸ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ - ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಂದು ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊತ್ತುತರುವ ಯುವಕನೊಂದಿಗೆ ಮಾತನಾಡುತ್ತಾ, “ಕಣಿವೆಯ ಆಚೆಗಿರುವ ಫಿಲಿಷ್ಟಿಯರ ಪಾಳೆಯಕ್ಕೆ ಹೋಗೋಣ” ಎಂದು ಹೇಳಿದನು. ಆದರೆ ಯೋನಾತಾನನು ತನ್ನ ತಂದೆಗೆ ಇದನ್ನು ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿ |