Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:21 - ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರೊಡನೆ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಹಿಬ್ರಿಯರು ಸೌಲ ಮತ್ತು, ಯೋನಾತಾನನ ಜೊತೆ ಇರುವ ಇಸ್ರಾಯೇಲರ ಸಂಗಡ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಲ್ಲದೆ ಮೊದಲಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು, ಸೌಲ ಮತ್ತು ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲರನ್ನು ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇದಲ್ಲದೆ, ಮುಂದಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಹಿಬ್ರಿಯರು, ಸೌಲ-ಯೋನಾತಾನರ ಜೊತೆಯಲ್ಲಿ ಬಂದ ಇಸ್ರಯೇಲರನ್ನು ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಲ್ಲದೆ ಮುಂಚಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು ಸೌಲ ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲ್ಯರನ್ನು ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಫಿಲಿಷ್ಟಿಯರ ಸೇವೆಯಲ್ಲಿ ಮೊದಲಿಂದಲೂ ಇದ್ದ ಇಬ್ರಿಯರು ಈಗಲೂ ಅವರ ಪಾಳೆಯದಲ್ಲಿದ್ದರು. ಆದರೆ ಆಗ ಈ ಇಬ್ರಿಯರು ಸೌಲ ಮತ್ತು ಯೋನಾತಾನರೊಂದಿಗೆ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:21
3 ತಿಳಿವುಗಳ ಹೋಲಿಕೆ  

ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಕೋಪಗೊಂಡು ಅವನಿಗೆ, “ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದಂತೆ, ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ, ನೀನು ಅವನಿಗೆ ನೇಮಿಸಿದ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವನನ್ನು ಕಳುಹಿಸಿಬಿಡು. ಏಕೆಂದರೆ ಇವನು ಯಾವುದರಿಂದ ತನ್ನ ಯಜಮಾನನ ಮೆಚ್ಚಿಗೆ ಪಡೆದುಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?


ಇಸ್ರಾಯೇಲರು ನಫ್ತಾಲಿಯಿಂದಲೂ, ಆಶೇರನಿಂದಲೂ, ಸಮಸ್ತ ಮನಸ್ಸೆಯವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.


ಫಿಲಿಷ್ಟಿಯರೇ, ನೀವು ಬಲಗೊಂಡು ಶೂರರಾಗಿರಿ. ಹಿಬ್ರಿಯರು ನಿಮಗೆ ಗುಲಾಮರಾಗಿ ಮಾಡಿದ ಪ್ರಕಾರ ನೀವು ಅವರಿಗೆ ಗುಲಾಮರಾಗದ ಹಾಗೆ ಶೂರರಾಗಿ ಇದ್ದು, ಯುದ್ಧಮಾಡಿರೆಂದು ಹೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು