Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:22 - ಕನ್ನಡ ಸಮಕಾಲಿಕ ಅನುವಾದ

22 ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯೀಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲರು ಕೇಳಿದಾಗ, ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಎಫ್ರಾಯೀಮಿನ ಪರ್ವತ ಪ್ರಾಂತ್ಯದಲ್ಲಿ ಅಡಗಿಕೊಂಡಿದ್ದ ಇಸ್ರಾಯೇಲರಿಗೆ ಫಿಲಿಷ್ಟಿಯರು ಓಡಿಹೋದರೆಂಬ ವರ್ತಮಾನವು ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಎಫ್ರಯಿಮ್ ಪರ್ವತಪ್ರಾಂತ್ಯದಲ್ಲಿ ಅಡಗಿಕೊಂಡಿದ್ದ ಇಸ್ರಯೇಲರಿಗೆ ಫಿಲಿಷ್ಟಿಯರು ಓಡಿಹೋದರೆಂಬ ಸಮಾಚಾರ ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಎಫ್ರಾಯೀಮ್ ಪರ್ವತಪ್ರಾಂತದಲ್ಲಿ ಅಡಗಿಕೊಂಡಿದ್ದ ಇಸ್ರಾಯೇಲ್ಯರಿಗೆ ಫಿಲಿಷ್ಟಿಯರು ಓಡಿಹೋದರೆಂಬ ವರ್ತಮಾನವು ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಫಿಲಿಷ್ಟಿಯ ಸೈನಿಕರು ಓಡಿಹೋಗುತ್ತಿರುವುದನ್ನು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅಡಗಿಕೊಂಡಿದ್ದ ಎಲ್ಲ ಇಸ್ರೇಲರೂ ಕೇಳಿದರು. ಆದ್ದರಿಂದ ಆ ಇಸ್ರೇಲರೂ ಯುದ್ಧದಲ್ಲಿ ಭಾಗಿಗಳಾಗಿ ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:22
4 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.


ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ, ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.


ಹಾಗೆಯೇ ಅವರಿಬ್ಬರೂ ತಾವು ಫಿಲಿಷ್ಟಿಯರ ಠಾಣ್ಯದವರೆಗೂ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರು, “ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಹಿಬ್ರಿಯರು ಹೊರಟು ಬರುತ್ತಾರೆ,” ಎಂದರು.


ಇಸ್ರಾಯೇಲರು ನಫ್ತಾಲಿಯಿಂದಲೂ, ಆಶೇರನಿಂದಲೂ, ಸಮಸ್ತ ಮನಸ್ಸೆಯವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು