Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:26 - ಕನ್ನಡ ಸಮಕಾಲಿಕ ಅನುವಾದ

26 ಜನರು ಆ ಅಡವಿಯಲ್ಲಿ ಹೋಗುವಾಗ, ಜೇನುತುಪ್ಪ ಸುರಿಯುತ್ತಿತ್ತು. ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟು ಯಾವನೂ ಅದನ್ನು ಬಾಯಿಗೆ ಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರು ಅಲ್ಲಿ ಜೇನುತುಪ್ಪ ಹರಿಯುವದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:26
4 ತಿಳಿವುಗಳ ಹೋಲಿಕೆ  

ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ದುಷ್ಟನಿಗೂ ಒಳ್ಳೆಯವನಿಗೂ ಕೆಟ್ಟವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಯಜ್ಞ ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನಿಗೆ ಹೇಗೋ ಹಾಗೆಯೇ ಪಾಪಿಗೂ ಇರುವುದು. ಆಣೆಯಿಡುವವನಿಗೆ ಹೇಗೋ ಹಾಗೆಯೇ, ಆಣೆಯಿಡಲು ಭಯಪಡುವವನಿಗೂ ಇರುವುದು.


ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.


ದೇಶದ ಜನರೆಲ್ಲರೂ ಅಡವಿಯಲ್ಲಿ ಹೋಗುತ್ತಿರುವಾಗ, ಅಲ್ಲಿ ನೆಲದ ಮೇಲೆ ಜೇನುಗೂಡು ಇತ್ತು.


ನೀವು ದೇವರ ಮುಂದೆ ಪ್ರಮಾಣ ಮಾಡಿದ್ದರಿಂದ, ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು