1 ಸಮುಯೇಲ 14:36 - ಕನ್ನಡ ಸಮಕಾಲಿಕ ಅನುವಾದ36 ಸೌಲನು ಜನರಿಗೆ, “ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿ ಹೋಗಿ, ಉದಯಕಾಲದವರೆಗೆ ಅವರನ್ನು ಸುಲಿದುಕೊಂಡು, ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು,” ಎಂದನು. ಅದಕ್ಕೆ ಜನರು, “ನಿನ್ನ ದೃಷ್ಟಿಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ಮಾಡು,” ಎಂದರು. ಆಗ ಯಾಜಕನು, “ದೇವರ ಸನ್ನಿಧಿಗೆ ಹೋಗೋಣ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಸೌಲನು ತನ್ನ ಸೈನಿಕರನ್ನು, “ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ, ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು, ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ” ಎಂದು ಕರೆದನು. ಅವರು, “ನಿನ್ನ ಇಷ್ಟದಂತೆ ಆಗಲಿ” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಸೌಲನು ತನ್ನ ಸೈನಿಕರನ್ನು, “ಬನ್ನಿ, ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ,” ಎಂದು ಕರೆದನು. ಅವರು, “ನಿಮ್ಮ ಇಷ್ಟದಂತೆ ಆಗಲಿ,” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿ; ನಾವು ದೇವರನ್ನು ವಿಚಾರಿಸೋಣ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಸೌಲನು ತನ್ನ ಸೈನಿಕರನ್ನು ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ ಬೆಳಗಾಗುವವರೆಗೆ ಅವರನ್ನು ಸುಲುಕೊಂಡು ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ ಎಂದು ಕರೆಯಲು ಅವರು - ನಿನ್ನ ಇಷ್ಟದಂತೆ ಆಗಲಿ ಎಂದು ಹೇಳಿದರು. ಆದರೆ ಯಾಜಕನು - ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ ಅನ್ನಲು ಸೌಲನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಸೌಲನು ತನ್ನ ಸೈನಿಕರಿಗೆ, “ಈ ರಾತ್ರಿಯೇ ಫಿಲಿಷ್ಟಿಯರ ಬೆನ್ನಟ್ಟೋಣ. ಅವರಲ್ಲಿರುವುದನ್ನೆಲ್ಲ ವಶಪಡಿಸಿಕೊಂಡು ಅವರನ್ನೆಲ್ಲ ಕೊಲ್ಲೋಣ” ಎಂದು ಹೇಳಿದನು. ಸೈನಿಕರು, “ನಿನಗೆ ಸರಿಕಂಡದ್ದನ್ನು ಮಾಡು” ಎಂದು ಉತ್ತರಕೊಟ್ಟರು. ಆದರೆ ಯಾಜಕನು, “ದೇವರನ್ನು ಕೇಳೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |