Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:40 - ಕನ್ನಡ ಸಮಕಾಲಿಕ ಅನುವಾದ

40 ಆಗ ಸೌಲನು ಸಮಸ್ತ ಇಸ್ರಾಯೇಲರಿಗೆ, “ನೀವು ಒಂದು ಕಡೆಯಲ್ಲಿ ಇರಿ. ನಾನೂ, ನನ್ನ ಮಗ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ,” ಎಂದನು. ಜನರು ಸೌಲನಿಗೆ, “ನಿನ್ನ ದೃಷ್ಟಿಗೆ ಒಳ್ಳೆಯದಾಗಿ ತೋರುವುದನ್ನು ಮಾಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆಗ ಸೌಲನು ಅವರಿಗೆ, “ನೀವೆಲ್ಲರೂ ಒಂದು ಕಡೆ ನಿಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು” ಅನ್ನಲು ಅವರು, “ನಿನ್ನ ಇಷ್ಟದಂತೆ ಆಗಲಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆಗ ಸೌಲನು ಅವರಿಗೆ, “ನೀವೆಲ್ಲರೂ ಒಂದು ಕಡೆ ನಿಲ್ಲಿರಿ; ನಾನೂ ನನ್ನ ಮಗ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು,” ಎಂದನು. ಅವರು, “ನಿಮ್ಮ ಇಷ್ಟದಂತೆ ಆಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆಗ ಸೌಲನು ಅವರಿಗೆ - ನೀವೆಲ್ಲರೂ ಒಂದು ಕಡೆಯಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು ಅನ್ನಲು ಅವರು - ನಿನ್ನ ಇಷ್ಟದಂತೆ ಆಗಲಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆಗ ಸೌಲನು, “ನೀವು ಈ ಕಡೆ ನಿಲ್ಲಿ. ನಾನು ಮತ್ತು ನನ್ನ ಮಗನಾದ ಯೋನಾತಾನನು ಆ ಕಡೆ ನಿಲ್ಲುತ್ತೇವೆ” ಎಂದು ಇಸ್ರೇಲರಿಗೆಲ್ಲ ಹೇಳಿದನು. ಅವರೆಲ್ಲ “ನಿಮ್ಮ ಇಷ್ಟದಂತಾಗಲಿ, ಸ್ವಾಮಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:40
6 ತಿಳಿವುಗಳ ಹೋಲಿಕೆ  

ಆಗ ಅರಸನ ಸೇವಕರು ಅರಸನಿಗೆ, “ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ, ಅದನ್ನು ಮಾಡುವುದಕ್ಕೆ ನಿನ್ನ ಸೇವಕರು ಸಿದ್ಧವಾಗಿದ್ದೇವೆ,” ಎಂದರು.


ಸೌಲನು ಜನರಿಗೆ, “ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿ ಹೋಗಿ, ಉದಯಕಾಲದವರೆಗೆ ಅವರನ್ನು ಸುಲಿದುಕೊಂಡು, ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು,” ಎಂದನು. ಅದಕ್ಕೆ ಜನರು, “ನಿನ್ನ ದೃಷ್ಟಿಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ಮಾಡು,” ಎಂದರು. ಆಗ ಯಾಜಕನು, “ದೇವರ ಸನ್ನಿಧಿಗೆ ಹೋಗೋಣ,” ಎಂದನು.


ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ, “ನಿನ್ನ ಮನಸ್ಸಿನಲ್ಲಿರುವುದನ್ನೆಲ್ಲಾ ಮಾಡು; ನಡಿ, ನಾನು ನನ್ನ ಸಂಪೂರ್ಣ ಹೃದಯದಿಂದ ನಿನ್ನ ಸಂಗಡ ಇದ್ದೇನೆ,” ಎಂದನು.


ಏಕೆಂದರೆ ನನ್ನ ಪುತ್ರನಾದ ಯೋನಾತಾನನಿಂದಾದರೂ ಉಂಟಾಗಿದ್ದರೆ, ಅವನು ಸತ್ತೇ ಸಾಯುವನೆಂದು ಇಸ್ರಾಯೇಲರನ್ನು ರಕ್ಷಿಸುವ ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ,” ಎಂದನು. ಆದರೆ ಸಮಸ್ತ ಜನರಲ್ಲಿ ಒಬ್ಬನಾದರೂ ಅವನಿಗೆ ಉತ್ತರ ಕೊಡಲಿಲ್ಲ.


ಸೌಲನು ಇಸ್ರಾಯೇಲರ ದೇವರಾದ ಯೆಹೋವ ದೇವರಿಗೆ, “ನೀವು ಪೂರ್ಣ ನಿರ್ಣಯವನ್ನು ದಯಪಾಲಿಸಿರಿ,” ಎಂದು ಹೇಳಿ ಚೀಟು ಹಾಕಿದನು. ಆಗ ಸೌಲನಿಗೂ ಯೋನಾತಾನನಿಗೂ ಚೀಟು ಬಂತು. ಆದರೆ ಜನರು ಪಾರಾದರು.


ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ, “ನೀನು ನಿನಗೆ ಒಳ್ಳೆಯದಾಗಿ ತೋರುವ ಹಾಗೆ ಮಾಡು. ಅವನು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ಕಾದುಕೊಂಡಿರು. ಯೆಹೋವ ದೇವರು ತಮ್ಮ ವಾಕ್ಯವನ್ನು ಪೂರೈಸಲಿ,” ಎಂದನು. ಹಾಗೆಯೇ ಅವಳು ನಿಂತು ತನ್ನ ಮಗುವು ಎದೆಹಾಲು ಬಿಡುವವರೆಗೂ ಅವನಿಗೆ ಎದೆಹಾಲು ಕೊಡುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು