1 ಸಮುಯೇಲ 14:45 - ಕನ್ನಡ ಸಮಕಾಲಿಕ ಅನುವಾದ45 ಆದರೆ ಜನರು ಸೌಲನಿಗೆ, “ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆಯನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಎಂದಿಗೂ ಇಲ್ಲ. ಯೆಹೋವ ದೇವರ ಜೀವದಾಣೆ, ಇದನ್ನು ಅವನು ದೇವರ ಸಹಾಯದಿಂದ ಮಾಡಿದ್ದರಿಂದ, ಅವನ ಒಂದು ಕೂದಲು ನೆಲಕ್ಕೆ ಬೀಳಬಾರದು,” ಎಂದು ಹೇಳಿ ಯೋನಾತಾನನು ಸಾಯದ ಹಾಗೆ ಪ್ರಾಯಶ್ಚಿತ್ತವನ್ನು ಮಾಡಿ ಬಿಡಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಜನರು ಅವನಿಗೆ, “ದೇವರ ಸಹಾಯದಿಂದ ಈ ದಿನ ಇಸ್ರಯೇಲರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೇ? ಕೂಡದು; ಸರ್ವೇಶ್ವರನಾಣೆ. ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು,” ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ. ಅಧ್ಯಾಯವನ್ನು ನೋಡಿ |