Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:50 - ಕನ್ನಡ ಸಮಕಾಲಿಕ ಅನುವಾದ

50 ಅಹೀಮಾಚನ ಪುತ್ರಿಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪ ನೇರನ ಮಗ ಅಬ್ನೇರನೆಂಬವನು ಅವನ ಸೈನ್ಯಾಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅಹೀಮಾಚನ ಮಗಳಾದ ಅಹೀನೋವಮಳು ಸೌಲನ ಹೆಂಡತಿ. ನೇರನ ಮಗನಾದ ಅಬ್ನೇರನು ಅವನ ಸೇನಾಪತಿ. ನೇರನು ಸೌಲನು ಚಿಕ್ಕಪ್ಪನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಅಹೀಮಾಚನ ಮಗಳಾದ ಅಹೀನೋವಮಳು ಅವನ ಹೆಂಡತಿ; ನೇರನ ಮಗನಾದ ಅಬ್ನೇರನು ಅವನ ಸೇನಾಪತಿ; ನೇರನು ಸೌಲನ ಚಿಕ್ಕಪ್ಪನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅಹೀಮಾಚನ ಮಗಳಾದ ಅಹೀನೋವಮಳು ಅವನ ಹೆಂಡತಿ; ನೇರನ ಮಗನಾದ ಅಬ್ನೇರನು ಅವನ ಸೇನಾಪತಿಯು; ನೇರನು ಸೌಲನ ಚಿಕ್ಕಪ್ಪನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಸೌಲನ ಹೆಂಡತಿಯ ಹೆಸರು ಅಹೀನೋವಮ್. ಅಹೀನೋವಮಳ ತಂದೆ ಅಹೀಮಾಚ. ನೇರನ ಮಗನಾದ ಅಬ್ನೇರನು ಸೌಲನ ಸೈನ್ಯದ ಸೇನಾಪತಿ. ನೇರನು ಸೌಲನ ಚಿಕ್ಕಪ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:50
9 ತಿಳಿವುಗಳ ಹೋಲಿಕೆ  

ಸೌಲನ ಸೈನ್ಯಾಧಿಪತಿಯಾದ ನೇರನ ಮಗನಾಗಿರುವ ಅಬ್ನೇರನು ಸೌಲನ ಮಗ ಈಷ್ಬೋಶೆತನನ್ನು ಮಹನಯಿಮಿಗೆ ಕರೆದುಕೊಂಡು ಹೋದನು.


ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.


ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟು ಹೋಗುವುದನ್ನು ಸೌಲನು ಕಂಡಾಗ, ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ, “ಅಬ್ನೇರನೇ, ಈ ಯುವಕನು ಯಾರ ಮಗನು?” ಎಂದನು. ಅದಕ್ಕೆ ಅಬ್ನೇರನು, “ಅರಸನೇ, ನಿನ್ನ ಪ್ರಾಣದಾಣೆ ನಾನರಿಯೆ,” ಎಂದನು.


ಆಗ ಸೌಲನ ಚಿಕ್ಕಪ್ಪನು, “ನೀವು ಎಲ್ಲಿಗೆ ಹೋದಿರಿ?” ಎಂದು ಅವನನ್ನೂ, ಅವನ ಸೇವಕನನ್ನೂ ಕೇಳಿದನು. ಅದಕ್ಕವನು, “ಕತ್ತೆಗಳನ್ನು ಹುಡುಕುವುದಕ್ಕೆ, ಅವುಗಳನ್ನು ಕಾಣದೆ ಹೋದುದರಿಂದ ಸಮುಯೇಲನ ಬಳಿಗೆ ಹೋದೆವು,” ಎಂದನು.


ದಾವೀದನು ಎದ್ದು ಸೌಲನು ಇಳಿದುಕೊಂಡಿದ್ದ ಸ್ಥಳಕ್ಕೆ ಬಂದನು. ಸೌಲನೂ, ಅವನ ದಂಡಿನ ನಾಯಕನಾಗಿರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಸೌಲನು ಮಧ್ಯದಲ್ಲಿ ಮಲಗಿದ್ದನು. ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು.


ಇದಲ್ಲದೆ ದರ್ಶಿಯಾದ ಸಮುಯೇಲನೂ, ಕೀಷನ ಮಗ ಸೌಲನೂ, ನೇರನ ಮಗ ಅಬ್ನೇರನೂ, ಚೆರೂಯಳ ಮಗ ಯೋವಾಬನೂ ಪ್ರತಿಷ್ಠೆ ಮಾಡಿದ್ದೆಲ್ಲವೂ ಮತ್ತು ಯಾರು ಪ್ರತಿಷ್ಠೆ ಮಾಡಿದ್ದರೋ, ಅದೆಲ್ಲವೂ ಶೆಲೋಮೋತನ ಕೈಕೆಳಗೂ, ಅವನ ಸಹೋದರರ ಕೈಕೆಳಗೂ ಇತ್ತು.


ಸೌಲನ ಕುಟುಂಬಕ್ಕೂ ದಾವೀದನ ಕುಟುಂಬಕ್ಕೂ ಯುದ್ಧ ನಡೆಯುತ್ತಿರುವಾಗ, ಅಬ್ನೇರನು ಸೌಲನ ಕುಟುಂಬದಲ್ಲಿ ತನ್ನದೇ ಆದ ಸ್ಥಾನವನ್ನು ಬಲಪಡಿಸಿಕೊಂಡನು.


ಇದಲ್ಲದೆ ಅರಸನು ತನ್ನ ಸೇವಕರಿಗೆ, “ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿಲ್ಲವೋ?


ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗ ಇದ್ದೋನು; ಬೆನ್ಯಾಮೀನನ ಗೋತ್ರಕ್ಕೆ ಅಬ್ನೇರನ ಮಗ ಯಾಸೀಯೇಲನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು