Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:7 - ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ, “ನಿನ್ನ ಮನಸ್ಸಿನಲ್ಲಿರುವುದನ್ನೆಲ್ಲಾ ಮಾಡು; ನಡಿ, ನಾನು ನನ್ನ ಸಂಪೂರ್ಣ ಹೃದಯದಿಂದ ನಿನ್ನ ಸಂಗಡ ಇದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಯುಧಗಳನ್ನು ಹೊರುವ ಸೇವಕನು, “ನಿನ್ನ ಮನಸ್ಸಿನಂತೆ ಮಾಡು, ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಯುಧಗಳನ್ನು ಹೊರುವವನು, “ನಿಮ್ಮ ಇಷ್ಟದಂತೆ ಮಾಡಿ; ನಿಮ್ಮ ಕೋರಿಕೆಯ ಹಾಗೆ ನಾನೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಯುಧಗಳನ್ನು ಹೊರುವವನು - ನಿನ್ನ ಮನಸ್ಸಿನಂತೆ ಮಾಡು; ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೋನಾತಾನನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಕನು, “ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು. ನಿನ್ನ ಕೆಲಸದಲ್ಲೆಲ್ಲಾ ನಾನು ನಿನ್ನೊಂದಿಗಿರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:7
8 ತಿಳಿವುಗಳ ಹೋಲಿಕೆ  

ಆಗ ನಾತಾನನು ಅರಸನಿಗೆ, “ಆಗಲಿ ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು. ಏಕೆಂದರೆ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಈ ಗುರುತುಗಳೆಲ್ಲಾ ನಿನಗೆ ಸಂಭವಿಸಿದಾಗ, ದೇವರು ನಿನ್ನ ಸಂಗಡ ಇರುವುದರಿಂದ ನೀನು ಆ ವೇಳೆಯಲ್ಲಿ ನಿನಗೆ ಕೈಗೂಡಿದ ಹಾಗೆ ಮಾಡು.


ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.


ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು.


ಆಗ ಯೋನಾತಾನನು, “ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.


ಆಗ ಅರಸನ ಸೇವಕರು ಅರಸನಿಗೆ, “ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ, ಅದನ್ನು ಮಾಡುವುದಕ್ಕೆ ನಿನ್ನ ಸೇವಕರು ಸಿದ್ಧವಾಗಿದ್ದೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು