Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:16 - ಕನ್ನಡ ಸಮಕಾಲಿಕ ಅನುವಾದ

16 ಆಗ ಸಮುಯೇಲನು ಸೌಲನಿಗೆ, “ಅದಿರಲಿ, ಯೆಹೋವ ದೇವರು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು,” ಎಂದನು. ಅದಕ್ಕವನು, “ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಸಮುವೇಲನು ಅವನಿಗೆ, “ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು” ಎನ್ನಲು ಅವನು, “ಹೇಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಸಮುವೇಲನು, “ಅದಿರಲಿ; ಸರ್ವೇಶ್ವರ ಕಳೆದ ರಾತ್ರಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು,” ಎಂದನು. ಅವನು, “ಹೇಳು,” ಎನ್ನಲು ಸಮುವೇಲನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಸಮುವೇಲನು ಅವನಿಗೆ - ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು ಎನ್ನಲು ಅವನು - ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸಮುವೇಲನು ಸೌಲನಿಗೆ, “ಯೆಹೋವನು ಕಳೆದ ರಾತ್ರಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುತ್ತೇನೆ” ಎಂದನು. ಸೌಲನು. “ಸರಿ, ತಿಳಿಸು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:16
8 ತಿಳಿವುಗಳ ಹೋಲಿಕೆ  

ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.


ಆದ್ದರಿಂದ ಈಗ ನಿಲ್ಲಿರಿ. ಯೆಹೋವ ದೇವರು ನಿಮಗೂ, ನಿಮ್ಮ ಪಿತೃಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಯೆಹೋವ ದೇವರ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.


ಪಟ್ಟಣದ ಹೊರಗೆ ಬಂದಾಗ, ಸಮುಯೇಲನು ಸೌಲನಿಗೆ, “ನಾನು ದೇವರ ಸಂದೇಶವನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪ ಹೊತ್ತು ನಿಲ್ಲು. ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು,” ಎಂದನು.


ಅದಕ್ಕೆ ಸೌಲನು, “ಜನರು ಅಮಾಲೇಕ್ಯರ ಬಳಿಯಿಂದ ತೆಗೆದುಕೊಂಡು ಬಂದವುಗಳು; ಏಕೆಂದರೆ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸುವುದಕ್ಕೋಸ್ಕರ ಮೇಲ್ತರವಾದ ಪಶುಕುರಿಗಳನ್ನು ಉಳಿಸಿಟ್ಟು, ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು,” ಎಂದನು.


ಆಗ ಸಮುಯೇಲನು, “ನೀನು ನಿನ್ನ ದೃಷ್ಟಿಯಲ್ಲಿ ಚಿಕ್ಕವನಾಗಿರುವಾಗಲೇ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ನೇಮಕವಾದಿಯಲ್ಲವೆ? ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿ ಅಭಿಷೇಕಿಸಿದರಲ್ಲವೆ?


ಆಗ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರ ಯೆಹೋವ ದೇವರ ವಾಕ್ಯವನ್ನು ಕೇಳು.


ಆಗ ಪ್ರವಾದಿಯಾದ ಯೆರೆಮೀಯನು ಈ ವಾಕ್ಯಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.


ಅನಂತರ ಅವಳು ಬಾಗಿಲಲ್ಲಿ ಪ್ರವೇಶಿಸುವಾಗ, ಅಹೀಯನು ಅವಳ ಹೆಜ್ಜೆಗಳ ಶಬ್ದ ಕೇಳುತ್ತಲೇ ಅವನು, “ಯಾರೊಬ್ಬಾಮನ ಪತ್ನಿಯೇ ಒಳಗೆ ಬಾ, ನೀನು ಮತ್ತೊಬ್ಬಳಂತೆ ತೋರಿಸಿಕೊಳ್ಳುವುದು ಏಕೆ? ನಾನು ಕಠಿಣವಾದವುಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು