Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:26 - ಕನ್ನಡ ಸಮಕಾಲಿಕ ಅನುವಾದ

26 ಆದರೆ ಸಮುಯೇಲನು ಸೌಲನಿಗೆ, “ನಾನು ನಿನ್ನ ಸಂಗಡ ಹಿಂದಿರುಗಿ ಬರುವುದಿಲ್ಲ. ಏಕೆಂದರೆ ನೀನು ಯೆಹೋವ ದೇವರ ವಾಕ್ಯವನ್ನು ತಿರಸ್ಕರಿಸಿದ್ದೀ. ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿರದ ಹಾಗೆ ತಿರಸ್ಕಾರಮಾಡಿಬಿಟ್ಟರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ” ಎಂದು ಹೇಳಿ ತಿರುಗಿಕೊಂಡು ಹೊರಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಸರ್ವೇಶ್ವರನ ಮಾತನ್ನು ತಳ್ಳಿಬಿಟ್ಟಿದ್ದರಿಂದ ಅವರು ನಿನ್ನನ್ನು ಇಸ್ರಯೇಲರ ಅರಸುತನದಿಂದ ತಳ್ಳಿಬಿಟ್ಟಿದ್ದಾರೆ,” ಎಂದು ಹೇಳಿ ಹಿಂದಿರುಗಿ ಅಲ್ಲಿಂದ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದಕ್ಕೆ ಸಮುವೇಲನು - ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವದಿಲ್ಲ; ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಇಸ್ರಾಯೇಲ್ಯರ ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ಹೇಳಿ ತಿರುಗಿಕೊಂಡು ಹೊರಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ಸಮುವೇಲನು ಸೌಲನಿಗೆ, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ನಿರಾಕರಿಸಿರುವೆ. ಈಗ ಆತನೂ ನಿನ್ನನ್ನು ಇಸ್ರೇಲಿನ ರಾಜತ್ವದಿಂದ ನಿರಾಕರಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:26
16 ತಿಳಿವುಗಳ ಹೋಲಿಕೆ  

ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು.


ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದನ್ನು ನೀನು ಕೈಗೊಳ್ಳದೆ ಹೋದದ್ದರಿಂದ, ಅವರು ತಮ್ಮ ಹೃದಯಕ್ಕೆ ತಕ್ಕಂಥ ಒಬ್ಬ ಮನುಷ್ಯನನ್ನು ಹುಡುಕಿ, ಅವನನ್ನು ತಮ್ಮ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾರೆ,” ಎಂದನು.


ಏಕೆಂದರೆ ಅವರಿಗೆ “ವಂದನೆ” ಎಂದು ಹೇಳುವವರು ಅವರ ದುಷ್ಕೃತ್ಯಗಳಲ್ಲಿ ಪಾಲುಗಾರರಾಗುತ್ತಾರೆ.


ಈ ಭೂಮಿಯೇ, ಕೇಳು. ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; ನನ್ನ ನಿಯಮವನ್ನು ತಿರಸ್ಕರಿಸಿದರು.


ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.”


ಹಾಗೆಯೇ ಸಮುಯೇಲನು ತಿರುಗಿ ಸೌಲನ ಹಿಂದೆ ಹೋದನು. ಸೌಲನು ಯೆಹೋವ ದೇವರನ್ನು ಆರಾಧಿಸಿದನು.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು.


ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.


ನೀನು ಯೆಹೋವ ದೇವರ ಮಾತನ್ನು ಕೇಳದೆ, ಅಮಾಲೇಕ್ಯರ ಮೇಲೆ ಇದ್ದ ಅವರ ಉಗ್ರಕೋಪವನ್ನು ತೀರಿಸದೆ ಹೋದದ್ದರಿಂದ, ಯೆಹೋವ ದೇವರು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದರು.


ನೀನು ಯೆಹೋವ ದೇವರ ದೃಷ್ಟಿಗೆ ಈ ಕೆಟ್ಟ ಕಾರ್ಯವನ್ನು ಮಾಡುವಂತೆ ಅವರ ವಾಕ್ಯವನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಖಡ್ಗದಿಂದ ಹೊಡೆದು ಹಾಕಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಇದಲ್ಲದೆ ಅವನನ್ನು ಅಮ್ಮೋನಿಯರ ಖಡ್ಗದಿಂದ ಕೊಂದು ಹಾಕಿಸಿದೆ.


ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು ಮತ್ತು ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು.


ಆದರೆ ಸೌಲನ ಮೇಲಿದ್ದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ, ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ. ನಾನು ಸೌಲನನ್ನು ನಿನ್ನ ಮುಂದೆಯೇ ಹೊರಡಿಸಿಬಿಟ್ಟೆನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು