1 ಸಮುಯೇಲ 15:32 - ಕನ್ನಡ ಸಮಕಾಲಿಕ ಅನುವಾದ32 ಸಮುಯೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ,” ಎಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ, “ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತು,” ಎಂದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ತರುವಾಯ ಸಮುವೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ಕರೆತನ್ನಿರಿ” ಎಂದನು. ಅಗಾಗನು ಮರಣಭಯ ತಪ್ಪಿತೆಂದು ನೆನಪಿಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ಬರಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ತರ ಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಸಮುವೇಲನು, “ಅಮಾಲೇಕ್ಯರ ರಾಜನಾದ ಅಗಾಗನನ್ನು ನನ್ನ ಬಳಿಗೆ ಕರೆದುಕೊಂಡು ಬಾ” ಎಂದು ಹೇಳಿದನು. ಅಗಾಗನು ಸಮುವೇಲನ ಹತ್ತಿರಕ್ಕೆ ಬಂದನು. ಅಗಾಗನನ್ನು ಸರಪಣಿಗಳಿಂದ ಬಂಧಿಸಲಾಗಿತ್ತು. ಅಗಾಗನು, “ಅವನು ನನ್ನನ್ನು ನಿಜವಾಗಿಯೂ ಕೊಲ್ಲುವುದಿಲ್ಲ” ಎಂದು ಆಲೋಚಿಸಿದನು. ಅಧ್ಯಾಯವನ್ನು ನೋಡಿ |