Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:33 - ಕನ್ನಡ ಸಮಕಾಲಿಕ ಅನುವಾದ

33 ಆದರೆ ಸಮುಯೇಲನು ಅವನಿಗೆ, “ನಿನ್ನ ಖಡ್ಗವು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗಿ ಮಾಡಿತೋ, ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು,” ಎಂದು ಹೇಳಿ, ಸಮುಯೇಲನು ಗಿಲ್ಗಾಲಿನಲ್ಲಿ ಯೆಹೋವ ದೇವರ ಮುಂದೆ ಅಗಾಗನಿಗೆ ಮರಣದಂಡನೆ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆದರೆ ಸಮುವೇಲನು ಅವನಿಗೆ: “ನಿನ್ನ ಕತ್ತಿ ಪುತ್ರಶೋಕವನ್ನುಂಟುಮಾಡಿತು ಅನೇಕ ಸ್ತ್ರೀಯರಿಗೆ; ನಿನ್ನ ತಾಯಿ ಸವಿಯಲಿ ಆ ಶೋಕವನು ಎಲ್ಲರಿಗೂ ಹೆಚ್ಚಿಗೆ’ ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಕಡಿದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆದರೆ ಸಮುವೇಲನು ಅವನಿಗೆ - ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರ ಶೋಕವನ್ನುಂಟುಮಾಡಿತು; ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ಸಮುವೇಲನು ಅಗಾಗನಿಗೆ, “ನಿನ್ನ ಕತ್ತಿಯು ಅನೇಕ ತಾಯಂದಿರಿಗೆ ಮಕ್ಕಳಿಲ್ಲದಂತೆ ಮಾಡಿದೆ. ಆದ್ದರಿಂದ ಈಗ ನಿನ್ನ ತಾಯಿಗೆ ಮಕ್ಕಳಿಲ್ಲದಂತಾಯಿತು” ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:33
17 ತಿಳಿವುಗಳ ಹೋಲಿಕೆ  

ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.


“ಯಾರಾದರೂ ಮನುಷ್ಯರ ರಕ್ತವನ್ನು ಸುರಿಸುತ್ತಾರೋ, ಅವರ ರಕ್ತವನ್ನು ಮನುಷ್ಯರೇ ಸುರಿಸುವರು. ಏಕೆಂದರೆ ದೇವರು ತಮ್ಮ ಸ್ವರೂಪದಲ್ಲಿಯೇ ಮನುಷ್ಯರನ್ನು ಸೃಷ್ಟಿಸಿದರು.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.


ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


“ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ.


ಯೆಹೋವ ದೇವರ ಖಡ್ಗವು ರಕ್ತದಲ್ಲಿ ಸ್ನಾನ ಮಾಡಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಮುಚ್ಚಲಾಗಿದೆ. ಏಕೆಂದರೆ ಯೆಹೋವ ದೇವರಿಗೆ ಬೊಚ್ರದಲ್ಲಿ ಬಲಿಯು, ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯು ಉಂಟು.


ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.


ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ, ಕಾನಾನ್ಯರೂ ಇಳಿದು, ಅವರನ್ನು ಹೊಡೆದು, ಹೊರ್ಮಾದವರೆಗೆ ಅಟ್ಟಿಬಿಟ್ಟರು.


ಮೋಶೆಯು ತನ್ನ ಕೈಯನ್ನು ಎತ್ತಿದಾಗ, ಇಸ್ರಾಯೇಲರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.


ಸಮುಯೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ,” ಎಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ, “ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತು,” ಎಂದುಕೊಂಡನು.


ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.


ಆದ್ದರಿಂದ ನಾನು ನಿಮ್ಮ ಜನರನ್ನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು, ನನ್ನ ಬಾಯಿಮಾತುಗಳಿಂದ ಅವರನ್ನು ಸಂಹರಿಸಿದ್ದೇನೆ. ನನ್ನ ನ್ಯಾಯತೀರ್ಪುಗಳು ಸೂರ್ಯನ ಹಾಗೆ ಹೊರಟವು.


ಹಲ್ಲಿಗೆ ಹಲ್ಲು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,


“ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದು ಹೋಗಬೇಕು. ನಾನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು