1 ಸಮುಯೇಲ 15:6 - ಕನ್ನಡ ಸಮಕಾಲಿಕ ಅನುವಾದ6 ಕೇನ್ಯರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ, ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ, ನೀವು ಅವರ ಮಧ್ಯದಲ್ಲಿಂದ ಹೊರಟು ಹೋಗಿರಿ,” ಎಂದು ಹೇಳಿದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಅವನು ಕೇನ್ಯರಿಗೆ, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ” ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ ಕೇನ್ಯರಿಗೆ ಅವನು, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರ ಅಲ್ಲವೆ?” ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ಅವನು ಕೇನ್ಯರಿಗೆ - ನೀವು ಅಮಾಲೇಕ್ಯರನ್ನು ಬಿಟ್ಟು ಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸೌಲನು ಕೇನ್ಯದ ಜನರಿಗೆ, “ಅಮಾಲೇಕ್ಯರನ್ನು ತ್ಯಜಿಸಿ ಹೊರಗೆ ಹೋಗಿ, ಆಗ ನಿಮ್ಮನ್ನು ಅಮಾಲೇಕ್ಯರೊಂದಿಗೆ ನಾಶಗೊಳಿಸುವುದಿಲ್ಲ. ಇಸ್ರೇಲರು ಈಜಿಪ್ಟಿನಿಂದ ಹೊರ ಬಂದಾಗ ನೀವು ಅವರಿಗೆ ಅನುಕಂಪ ತೋರಿದ್ದೀರಿ” ಎಂದು ಹೇಳಿದನು. ಆದ್ದರಿಂದ ಕೇನ್ಯರು ಅಮಾಲೇಕ್ಯರನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿ |