Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಇಷಯನು ಅವನನ್ನು ಕರೆಯಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ, ಸುಂದರ ಮುಖವುಳ್ಳವನಾಗಿಯೂ, ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಯೆಹೋವ ದೇವರು ಸಮುಯೇಲನಿಗೆ, “ನೀನೆದ್ದು ಇವನನ್ನು ಅಭಿಷೇಕಿಸು. ಇವನು ಅವನೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ಕೆಂಬಣ್ಣದವನು, ಸುಂದರ ನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ - ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ ಎಂದು ಆಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಷಯನು ಕಿರಿಯ ಮಗನನ್ನು ಕರೆತರಲು ಒಬ್ಬನನ್ನು ಕಳುಹಿಸಿದನು. ಇವನಾದರೋ ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಮೇಲೆದ್ದು ನಿಲ್ಲು, ಅವನನ್ನು ಅಭಿಷೇಕಿಸು. ಇವನನ್ನೇ ನಾನು ಆರಿಸಿದ್ದು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:12
19 ತಿಳಿವುಗಳ ಹೋಲಿಕೆ  

ಅವಳ ರಾಜಕುಮಾರರು ಹಿಮಕ್ಕಿಂತಲೂ ಪ್ರಕಾಶಮಾನವಾಗಿದ್ದರು. ಹಾಲಿಗಿಂತಲೂ ಬೆಳ್ಳಗಿದ್ದರು. ಅವರು ಮೈಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು. ಅವರ ಹೊಳಪು ಇಂದ್ರನೀಲ ಮಣಿಯ ಹಾಗಿತ್ತು.


ನನ್ನ ಪ್ರಿಯನು, ತೇಜೋಮಯನು, ಕೆಂಪೂ ಬಣ್ಣವುಳ್ಳವನು. ಹತ್ತು ಸಾವಿರ ಜನರಲ್ಲಿ ಶ್ರೇಷ್ಠನು.


“ಆ ಸಮಯದಲ್ಲಿಯೇ ಮೋಶೆ ಜನಿಸಿದನು. ಅವನು ದೇವರ ದೃಷ್ಟಿಯಲ್ಲಿ ಸುಂದರನಾಗಿದ್ದನು. ಮೂರು ತಿಂಗಳುಗಳ ಕಾಲ ಅವನು ತನ್ನ ತಂದೆಯ ಮನೆಯಲ್ಲೇ ಬೆಳೆದನು.


ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.


ಅವನ ಖೇಡ್ಯವನ್ನು ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದನನ್ನು ದೃಷ್ಟಿಸಿ ನೋಡಿದಾಗ, ಅವನು ಕೆಂಪಾದವನಾಗಿಯೂ, ಸುಂದರ ರೂಪವುಳ್ಳವನಾಗಿಯೂ ಇರುವ ಹುಡುಗನಾಗಿದ್ದುದರಿಂದ, ಅವನನ್ನು ತಿರಸ್ಕರಿಸಿ ದಾವೀದನಿಗೆ,


ಸಮುಯೇಲನು ಸೌಲನನ್ನು ಕಂಡಾಗ ಯೆಹೋವ ದೇವರು, “ಇಗೋ, ನಾನು ನಿನಗೆ ಹೇಳಿದ ಮನುಷ್ಯನು ಇವನೇ. ಇವನೇ ನನ್ನ ಜನರನ್ನು ಆಳುವನು,” ಎಂದರು.


ಹೀಗಿರುವುದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ, ತನ್ನ ಊಟದ ವಿಷಯದಲ್ಲಿ ಹೊರತು ಬೇರೆ ಯಾವುದರ ವಿಷಯದಲ್ಲಿಯೂ ಚಿಂತಿಸದೆ ಇದ್ದನು. ಯೋಸೇಫನು ಸುರೂಪಿಯೂ ಸುಂದರನೂ ಆಗಿದ್ದನು.


ನಂಬಿಕೆಯಿಂದಲೇ ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರುವುದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.


ಆ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತಳು. ಅದು ಸುಂದರವಾಗಿದ್ದುದರಿಂದ ಮೂರು ತಿಂಗಳು ಬಚ್ಚಿಟ್ಟರು.


ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟು ಹೋಗುವುದನ್ನು ಸೌಲನು ಕಂಡಾಗ, ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ, “ಅಬ್ನೇರನೇ, ಈ ಯುವಕನು ಯಾರ ಮಗನು?” ಎಂದನು. ಅದಕ್ಕೆ ಅಬ್ನೇರನು, “ಅರಸನೇ, ನಿನ್ನ ಪ್ರಾಣದಾಣೆ ನಾನರಿಯೆ,” ಎಂದನು.


“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.


ದಾವೀದನ ಕಡೆಯ ಮಾತುಗಳು: “ಇಷಯನ ಮಗ ದಾವೀದನ ನುಡಿಗಳಿವು: ಉನ್ನತವಾಗಿ ಸಾಗಿದ ಪುರುಷನು ಯಾಕೋಬನ ದೇವರಿಂದ ಅಭಿಷಿಕ್ತನಾದವನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನೆಂದರೆ:


ಅಲ್ಲಿ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಲಿ. ತುತೂರಿಯನ್ನು ಊದಿ, ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಿರಿ.


ತಮ್ಮ ಸೇವಕ ದಾವೀದನನ್ನು ಆಯ್ದುಕೊಂಡು, ಕುರಿಹಟ್ಟಿಯಿಂದ ಅವನನ್ನು ತೆಗೆದುಕೊಂಡರು.


ಆಗ ಅವನು, “ಇವು ಸಮಸ್ತ ಭೂಮಿಯ ಕರ್ತ ಆಗಿರುವವರ ಸನ್ನಿಧಿಸೇವೆ ಮಾಡಲು ಅಭಿಷೇಕ ಹೊಂದಿರುವ ಇಬ್ಬರು ಸೇವಕರನ್ನು ಸೂಚಿಸುತ್ತದೆ,” ಎಂದನು.


ಆಗ ಸೇವಕರಲ್ಲಿ ಒಬ್ಬನು ಅವನಿಗೆ ಉತ್ತರವಾಗಿ, “ವಾದ್ಯ ಬಾರಿಸಲು ನಿಪುಣನಾದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ಕಂಡೆನು. ಅವನು ಧೈರ್ಯಶಾಲಿಯೂ, ಪರಾಕ್ರಮಶಾಲಿಯೂ, ರಣಶೂರನೂ, ವಾಕ್ಚತುರನೂ, ಸುಂದರನೂ ಆಗಿದ್ದಾನೆ. ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು