1 ಸಮುಯೇಲ 16:13 - ಕನ್ನಡ ಸಮಕಾಲಿಕ ಅನುವಾದ13 ಸಮುಯೇಲನು ಎಣ್ಣೆ ಇರುವ ಕೊಂಬನ್ನು ತೆಗೆದುಕೊಂಡು, ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಯೆಹೋವ ದೇವರ ಆತ್ಮರು ಕೂಡಲೆ ದಾವೀದನ ಮೇಲೆ ಇಳಿದು ಬಂದರು. ಅನಂತರ ಸಮುಯೇಲನು ಎದ್ದು ರಾಮಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟು ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿ |