Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಸಮುಯೇಲನು, “ನಾನು ಹೋಗುವುದು ಹೇಗೆ? ಸೌಲನು ಅದನ್ನು ಕೇಳಿದರೆ, ನನ್ನನ್ನು ಕೊಂದುಹಾಕುವನು,” ಎಂದನು. ಅದಕ್ಕೆ ಯೆಹೋವ ದೇವರು, “ನೀನು ಒಂದು ಕಡಸನ್ನು ನಿನ್ನ ಸಂಗಡ ತೆಗೆದುಕೊಂಡುಹೋಗಿ, ‘ನಾನು ಯೆಹೋವ ದೇವರಿಗಾಗಿ ಯಜ್ಞಮಾಡುವುದಕ್ಕೆ ಬಂದೆನು,’ ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ” ಎಂದನು. ಅದಕ್ಕೆ ಯೆಹೋವನು, “ನೀನು ಒಂದು ಕರುವನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವುದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕಾಗಿ ಕರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ?’ ಎಂದನು. ಆಗ ಸರ್ವೇಶ್ವರ, “ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗು. ಸರ್ವೇಶ್ವರನಿಗೆ ಬಲಿಯರ್ಪಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ಜೆಸ್ಸೆಯನನ್ನು ಅದಕ್ಕೆ ಆಮಂತ್ರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದಕ್ಕೆ ಸಮುವೇಲನು - ನಾನು ಹೋಗುವದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ ಅನ್ನಲು ಆತನು - ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕೆ ಕರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅದಕ್ಕೆ ಸಮುವೇಲನು, “ನಾನು ಹೊರಟರೆ ಸೌಲನಿಗೆ ಈ ಸುದ್ದಿಯು ತಿಳಿಯುತ್ತದೆ. ಆಗ ಅವನು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಾನೆ” ಎಂದನು. ಯೆಹೋವನು, “ಬೆತ್ಲೆಹೇಮಿಗೆ ಹೋಗು. ನಿನ್ನೊಡನೆ ಒಂದು ಎಳೆಕರುವನ್ನು ತೆಗೆದುಕೊಂಡು ಹೋಗು. ‘ನಾನು ಯೆಹೋವನಿಗೆ ಯಜ್ಞವನ್ನರ್ಪಿಸಲು ಬಂದಿದ್ದೇನೆ’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:2
8 ತಿಳಿವುಗಳ ಹೋಲಿಕೆ  

ಅವರು ಇವರಿಗೆ ಉತ್ತರವಾಗಿ, “ಅವನು ಇದ್ದಾನೆ, ನಿಮ್ಮ ಮುಂದೆ ಇದ್ದಾನೆ, ಈಗ ಬೇಗ ಹೋಗಿರಿ, ಏಕೆಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವುದರಿಂದ ಅವನು ಈ ಹೊತ್ತು ಪಟ್ಟಣಕ್ಕೆ ಬಂದಿದ್ದಾನೆ.


ಅವನು ನನಗೆ, ‘ದಯಮಾಡಿ ನನಗೆ ಅಪ್ಪಣೆಕೊಡು. ಏಕೆಂದರೆ ಊರೊಳಗೆ ನಮ್ಮ ಕುಟುಂಬಕ್ಕೆ ಯಜ್ಞ ಮಾಡುವುದಿದೆ. ನನ್ನ ಸಹೋದರರು ನನ್ನನ್ನು ಬರಲು ಹೇಳಿ ಕಳುಹಿಸಿದರು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನಾನು ಅಪ್ಪಣೆ ತೆಗೆದುಕೊಂಡು ನನ್ನ ಸಹೋದರರನ್ನು ಕಾಣುವುದಕ್ಕೆ ಹೋಗುತ್ತೇನೆ,’ ಎಂದನು. ಆದ್ದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ,” ಎಂದನು.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಮರಿಯಳು ಆ ದೇವದೂತನಿಗೆ, “ಇದು ಹೇಗಾಗುವುದು, ನಾನು ಕನ್ಯೆ?” ಎಂದಳು.


ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗಿ, ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತರುವುದಕ್ಕೆ ನಾನು ಎಷ್ಟರವನು?” ಎಂದನು.


ಇಷಯನನ್ನು ಯಜ್ಞವನ್ನು ಅರ್ಪಿಸುವುದಕ್ಕೆ ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವೆನು. ನಾನು ನಿನಗೆ ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ನನಗೋಸ್ಕರ ಅಭಿಷೇಕಿಸಬೇಕು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು