Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:22 - ಕನ್ನಡ ಸಮಕಾಲಿಕ ಅನುವಾದ

22 ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ, “ದಾವೀದನು ನನ್ನ ಸಮ್ಮುಖದಲ್ಲಿ ಸೇವೆಮಾಡಲಿ. ಏಕೆಂದರೆ ನಾನು ದಾವೀದನನ್ನು ಮೆಚ್ಚಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತರುವಾಯ ಸೌಲನು ಜೆಸ್ಸೆಯನ ಬಳಿಗೆ ದೂತರನ್ನು ಅಟ್ಟಿ, ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲೇ ಸೇವೆಮಾಡಲಿ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಅಟ್ಟಿ ಅವನಿಗೆ - ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ತರುವಾಯ ಸೌಲನು ಇಷಯನಿಗೆ, “ದಾವೀದನು ಇಲ್ಲಿಯೇ ನನ್ನ ಸೇವೆಯಲ್ಲಿ ಇರಲಿ. ನಾನು ಅವನನ್ನು ಬಹಳ ಪ್ರೀತಿಸುತ್ತೇನೆ” ಎಂಬ ಸುದ್ದಿಯನ್ನು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:22
7 ತಿಳಿವುಗಳ ಹೋಲಿಕೆ  

ಹಾಗೆಯೇ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಇವನನ್ನು ಬಹಳವಾಗಿ ಮೆಚ್ಚಿದನು. ಅವನನ್ನು ತನ್ನ ಆಯುಧ ಹೊರುವವರಲ್ಲಿ ಒಬ್ಬನನ್ನಾಗಿ ನೇಮಿಸಿಕೊಂಡನು.


ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ, ದಾವೀದನು ಕಿನ್ನರಿಯನ್ನು ತೆಗೆದುಕೊಂಡು, ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವುದು.


ಅರಸನು ರಾಜಭೋಜನದಲ್ಲಿಯೂ, ತಾನು ಕುಡಿಯುವ ದ್ರಾಕ್ಷಾರಸದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿಸಿದನು. ಹೀಗೆ ಅವರು ಮೂರು ವರ್ಷಗಳ ಕಾಲ ಪೋಷಿಸಲಾದ ಮೇಲೆ ಅರಸನ ಸನ್ನಿಧಿಯ ಸೇವಕರಾಗುವರು.


ಲಾಬಾನನು ಅವನಿಗೆ, “ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವನಾಗಿದ್ದರೆ, ನನ್ನ ಬಳಿಯಲ್ಲಿಯೇ ಇರು. ಏಕೆಂದರೆ ಯೆಹೋವ ದೇವರು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾರೆಂದು ನಾನು ಭವಿಷ್ಯಜ್ಞಾನ ಅನುಭವದಿಂದ ಕಲಿತುಕೊಂಡಿದ್ದೇನೆ.


ಆದ್ದರಿಂದ ಯೋಸೇಫನು ಪೋಟೀಫರನ ದೃಷ್ಟಿಯಲ್ಲಿ ದಯೆಹೊಂದಿ ಅವನ ಸೇವೆ ಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ, ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.


ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನನ್ನು ಧೈರ್ಯಗೊಳಿಸು. ಅವನೇ ಆ ನಾಡನ್ನು ಇಸ್ರಾಯೇಲಿಗೆ ಸ್ವಾಧೀನಪಡಿಸುವನು.


ಯೆಹೋವ ದೇವರೇ, ನನ್ನ ಹೃದಯವು ಗರ್ವದ್ದಲ್ಲ, ನನಗೆ ಸೊಕ್ಕಿನ ಕಣ್ಣಿಲ್ಲ ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ಕೈ ಹಾಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು