Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:7 - ಕನ್ನಡ ಸಮಕಾಲಿಕ ಅನುವಾದ

7 ಆದರೆ ಯೆಹೋವ ದೇವರು ಸಮುಯೇಲನಿಗೆ, “ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:7
34 ತಿಳಿವುಗಳ ಹೋಲಿಕೆ  

ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ಆದರೆ ನೀತಿಯ ತೀರ್ಪನ್ನು ಮಾಡಿರಿ,” ಎಂದರು.


“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


ಯೇಸು ಅವರಿಗೆ, “ನೀವು ಮನುಷ್ಯರ ಮುಂದೆ ನೀತಿಕರಿಸಿಕೊಳ್ಳುವವರು, ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾರೆ. ಮನುಷ್ಯರಲ್ಲಿ ಶ್ರೇಷ್ಠವೆಂದು ಎಣಿಸಿಕೊಳ್ಳುವಂಥದ್ದು ದೇವರ ದೃಷ್ಟಿಯಲ್ಲಿ ಅದು ಅಸಹ್ಯವಾಗಿದೆ.


ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ.


ಮನುಷ್ಯನ ಮಾರ್ಗಗಳೆಲ್ಲಾ ತನ್ನ ದೃಷ್ಟಿಯಲ್ಲಿ ಶುದ್ಧವಾಗಿವೆ, ಆದರೆ ಯೆಹೋವ ದೇವರು ಅವನ ಉದ್ದೇಶಗಳನ್ನು ಪರೀಕ್ಷಿಸುತ್ತಾರೆ.


ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ. ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.


ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ಓ ಸೇನಾಧೀಶ್ವರ ಯೆಹೋವ ದೇವರೇ, ನೀತಿವಂತರನ್ನು ಪರಿಶೋಧಿಸುವವರೇ, ಅಂತರಿಂದ್ರಿಯಗಳನ್ನೂ, ಹೃದಯವನ್ನೂ ನೋಡುವವರೇ, ನೀವು ಅವರಿಗೆ ಪ್ರತಿದಂಡನೆ ಮಾಡುವುದನ್ನು ನಾನು ನೋಡುವಂತೆ ಮಾಡಿ. ಏಕೆಂದರೆ, ನಿಮಗೆ ನನ್ನ ವ್ಯಾಜ್ಯವನ್ನು ತಿಳಿಯಮಾಡಿದ್ದೇನೆ.


ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


“ಅವನ ಪತ್ರಗಳು ತೀಕ್ಷ್ಣವಾಗಿಯೂ ಶಕ್ತಿಯುತವಾಗಿಯೂ ಇವೆ. ಆದರೆ ಅವನು ಎದುರು ಬಂದಾಗ ನಿರ್ಬಲನೂ ಕೆಲಸಕ್ಕೆ ಬಾರದ ಮಾತುಗಳನ್ನಾಡುವವನೂ ಆಗಿದ್ದಾನೆ,” ಎಂದು ಕೆಲವರು ಹೇಳುತ್ತಾರೆ.


ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು.


ನಿಮಗೆ ಮಾಂಸದ ಕಣ್ಣುಗಳುಂಟೋ? ಮನುಷ್ಯರು ನೋಡುವಂತೆಯೇ ನೀವೂ ನೋಡುತ್ತೀರೋ?


ಸಮಸ್ತ ಇಸ್ರಾಯೇಲಿನಲ್ಲಿ ಬಹಳ ಹೊಗಳಿಕೆಗೆ ಪಾತ್ರನಾದ ಅಬ್ಷಾಲೋಮನಂಥ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.


ಅವನಿಗೆ ಒಳ್ಳೆಯ ಪ್ರಾಯಸ್ಥನಾದ ಸೌಲನೆಂಬ ಹೆಸರುಳ್ಳ ಒಬ್ಬ ಒಳ್ಳೆಯ ಮಗನಿದ್ದನು. ಇಸ್ರಾಯೇಲರಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನಾದರೂ ಇರಲಿಲ್ಲ. ಅವನ ಭುಜವು ಜನರ ಮಧ್ಯೆ ಕಾಣುವಷ್ಟು ಎತ್ತರವಾಗಿದ್ದನು.


ಆದರೆ ನೀತಿಯಾಗಿ ನ್ಯಾಯತೀರಿಸುವಂಥ ಅಂತರಿಂದ್ರಿಯಗಳನ್ನೂ, ಹೃದಯವನ್ನೂ ಶೋಧಿಸುವಂಥ ಸೇನಾಧೀಶ್ವರ ಯೆಹೋವ ದೇವರೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ಏಕೆಂದರೆ ನಿನಗೆ ನನ್ನ ವ್ಯಾಜ್ಯವನ್ನು ಒಪ್ಪಿಸಿದ್ದೇನೆ.


ಮರಣವೂ ಪಾತಾಳವೂ ಯೆಹೋವ ದೇವರಿಗೆ ಕಾಣುತ್ತಿರುವಾಗ, ಮನುಷ್ಯರ ಹೃದಯಗಳು ಅವರಿಗೆ ಮುಚ್ಚುಮರೆಯೇ?


ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. ನೀತಿಯುಳ್ಳ ದೇವರೇ, ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ.


ನೀವು ಹೊರಗಿನ ತೋರಿಕೆಗಳನ್ನು ಮಾತ್ರ ತೀರ್ಪುಮಾಡುವವರಾಗಿದ್ದೀರಿ. ಯಾರಾದರೂ ತಾನು ಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ತಾನು ಹೇಗೆ ಕ್ರಿಸ್ತ ಯೇಸುವಿನವನೋ, ಹಾಗೆಯೇ ನಾವೂ ಕ್ರಿಸ್ತ ಯೇಸುವಿನವರು ಎಂದು ಅವನು ತಿಳಿದುಕೊಳ್ಳಲಿ.


ನೀವು ಮಾನವ ರೀತಿಯಲ್ಲಿ ತೀರ್ಪು ಮಾಡುತ್ತೀರಿ. ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.


ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ದೇವರು ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು. ಅವನ ಮುಖವು ಬಾಡಿತು.


“ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ. ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು. ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು.


“ದಾವೀದನು ಇನ್ನೂ ಹೆಚ್ಚಾಗಿ ಹೇಳಿಕೊಳ್ಳುವುದೇನಿದೆ? ಏಕೆಂದರೆ ನೀವು ನಿಮ್ಮ ಸೇವಕನನ್ನು ಚೆನ್ನಾಗಿ ಬಲ್ಲಿರಿ; ಓ ಸಾರ್ವಭೌಮ ಯೆಹೋವ ದೇವರೇ,


ನೀವು ವಾಸಮಾಡುವ ಪರಲೋಕದಿಂದ ಕೇಳಿ ಮನ್ನಿಸಿ, ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.


ನೀನು, “ಅದು ನನಗೆ ಏನೂ ಗೊತ್ತಿಲ್ಲ” ಎಂದು ಹೇಳಿದರೆ, ಹೃದಯವನ್ನು ಪರಿಶೋಧಿಸುವ ದೇವರು ಅದನ್ನು ತಿಳಿಯುವದಿಲ್ಲವೋ? ನಿನ್ನ ಜೀವವನ್ನು ಕಾಯುವಾತನು ಅದನ್ನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?


“ನಿಮ್ಮ ಸೇವಕನ ಘನತೆಯ ನಿಮಿತ್ತ, ದಾವೀದನು ಇನ್ನೂ ಹೆಚ್ಚಾಗಿ ಹೇಳಿಕೊಳ್ಳುವುದೇನಿದೆ? ಏಕೆಂದರೆ ನೀವು ನಿಮ್ಮ ಸೇವಕನನ್ನು ಚೆನ್ನಾಗಿ ಬಲ್ಲಿರಿ.


ಆಕಾಶಗಳನ್ನು ದೃಷ್ಟಿಸಿ ನೋಡು; ನಿನಗಿಂತಲೂ ಎತ್ತರವಾಗಿರುವ ಮೇಘಗಳನ್ನು ದೃಷ್ಟಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು