1 ಸಮುಯೇಲ 17:10 - ಕನ್ನಡ ಸಮಕಾಲಿಕ ಅನುವಾದ10 ಆ ಫಿಲಿಷ್ಟಿಯನು, “ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ. ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮತ್ತು ಅವನು, “ಈಹೊತ್ತು ಇಸ್ರಾಯೇಲ ಸೈನ್ಯದವರನ್ನು ಕುರಿತು. ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ” ಎಂದು ಸವಾಲು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದೂ ಅಲ್ಲದೆ ಆ ಫಿಲಿಷ್ಟಿಯನು, “ಇಸ್ರಯೇಲ್ ಸೈನಿಕರಿಗೆ ನಾನು ಇದೀಗಲೇ ಹಾಕುವ ಸವಾಲು: ಇಂದು ನನ್ನೊಡನೆ ಕಾಳಗಕ್ಕೆ ನಿಮ್ಮಿಂದ ಒಬ್ಬನನ್ನು ಆಯ್ದು ಕಳುಹಿಸಿ, ನೋಡೋಣ,” ಎಂದು ಕೊಚ್ಚಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮತ್ತು ಅವನು - ಈ ಹೊತ್ತು ಇಸ್ರಾಯೇಲ್ ಸೈನ್ಯದವರನ್ನು ಹೀಯಾಳಿಸುತ್ತೇನೆ; ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ ಎಂದು ಕೊಚ್ಚಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಫಿಲಿಷ್ಟಿಯನು, “ಈ ದಿನ ನಾನು ಇಸ್ರೇಲ್ ಸೈನ್ಯವನ್ನು ಹೀಯಾಳಿಸುವೆನು. ನನ್ನೊಂದಿಗೆ ಹೋರಾಡಲು ನಿಮ್ಮ ಮನುಷ್ಯನೊಬ್ಬನನ್ನು ಕಳುಹಿಸಿ” ಎಂದು ಕೊಚ್ಚಿಕೊಂಡನು. ಅಧ್ಯಾಯವನ್ನು ನೋಡಿ |