Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:17 - ಕನ್ನಡ ಸಮಕಾಲಿಕ ಅನುವಾದ

17 ಇಷಯನು ತನ್ನ ಮಗನಾದ ದಾವೀದನಿಗೆ, “ನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ, ಈ ಹತ್ತು ರೊಟ್ಟಿಗಳನ್ನೂ ತೆಗೆದುಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಂದು ದಿನ ಇಷಯನು ತನ್ನ ಮಗನಾದ ದಾವೀದನಿಗೆ, “ಇಗೋ ಇಲ್ಲಿ ಮೂವತ್ತು ಸೇರು ಹುರಿದ ಧಾನ್ಯ, ಹತ್ತು ರೊಟ್ಟಿಗಳೂ ಇರುತ್ತವೆ. ಇವುಗಳನ್ನು ತೆಗೆದುಕೊಂಡು ಶೀಘ್ರವಾಗಿ ಪಾಳೆಯಕ್ಕೆ ಹೋಗಿ ನಿನ್ನ ಅಣ್ಣಂದಿರಿಗೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒಂದು ದಿನ ಜೆಸ್ಸೆಯನು ತನ್ನ ಮಗ ದಾವೀದನಿಗೆ, “ನೋಡು, ಇಲ್ಲಿ ಹತ್ತು ಕಿಲೋಗ್ರಾಂ ಹುರಿಗಾಳು, ಹತ್ತು ರೊಟ್ಟಿ ಇವೆ. ಇವುಗಳನ್ನು ತೆಗೆದುಕೊಂಡು ಬೇಗನೆ ಪಾಳೆಯಕ್ಕೆ ಹೋಗಿ ನಿನ್ನ ಅಣ್ಣಂದಿರಿಗೆ ಕೊಟ್ಟು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಂದು ದಿವಸ ಇಷಯನು ತನ್ನ ಮಗನಾದ ದಾವೀದನಿಗೆ - ಇಗೋ, ಇಲ್ಲಿ ಮೂವತ್ತು ಸೇರು ಹುರಿಗಾಳೂ ಹತ್ತು ರೊಟ್ಟಿಗಳೂ ಇರುತ್ತವೆ. ಇವುಗಳನ್ನು ತೆಗೆದುಕೊಂಡು ಶೀಘ್ರವಾಗಿ ಪಾಳೆಯಕ್ಕೆ ಹೋಗಿ ನಿನ್ನ ಅಣ್ಣಂದಿರಿಗೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒಂದು ದಿನ ಇಷಯನು ತನ್ನ ಮಗನಾದ ದಾವೀದನಿಗೆ, “ಬೇಯಿಸಿದ ಮೂವತ್ತು ಸೇರು ಕಾಳುಗಳನ್ನು ಮತ್ತು ಹತ್ತು ರೊಟ್ಟಿಗಳನ್ನು ಸೈನ್ಯದಲ್ಲಿರುವ ನಿನ್ನ ಸಹೋದರರಿಗಾಗಿ ತೆಗೆದುಕೊಂಡು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:17
6 ತಿಳಿವುಗಳ ಹೋಲಿಕೆ  

ಆಗ ಅಬೀಗೈಲಳು ತೀವ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸವನ್ನೂ ಬೇಯಿಸಿದ ಐದು ಕುರಿಗಳ ಮಾಂಸವನ್ನೂ ಐವತ್ತು ಸೇರು ಹುರಿದ ಧಾನ್ಯವನ್ನೂ ಒಣಗಿದ ನೂರು ದ್ರಾಕ್ಷಿ ಗೊನೆಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ಕತ್ತೆಗಳ ಮೇಲೆ ಹೇರಿಸಿಕೊಂಡು,


ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.


ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!


ಹಾಸಿಗೆಗಳನ್ನು, ಬಟ್ಟಲುಗಳನ್ನು, ಮಡಕೆ, ಗೋಧಿ, ಜವೆಗೋಧಿ, ಹಿಟ್ಟು, ಹುರಿದ ಕಾಳು ಅವರೆ, ಅಲಸಂದಿ,


ಊಟದ ವೇಳೆಯಲ್ಲಿ ಬೋವಜನು ಅವಳಿಗೆ, “ಇಲ್ಲಿ ಹತ್ತಿರ ಬಂದು ರೊಟ್ಟಿ ತಿಂದು ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು,” ಎಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು, ಇನ್ನೂ ಉಳಿಸಿಕೊಂಡಳು.


ಆದರೆ ಆ ಫಿಲಿಷ್ಟಿಯನು ಪ್ರತಿ ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು