1 ಸಮುಯೇಲ 17:23 - ಕನ್ನಡ ಸಮಕಾಲಿಕ ಅನುವಾದ23 ಅವನು ಇವರ ಸಂಗಡ ಮಾತನಾಡಿಕೊಳ್ಳುತ್ತಾ ಇರುವಾಗ, ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು, ಮೊದಲಿನ ಹಾಗೆಯೇ ಮಾತನಾಡಿದನು. ಆ ಮಾತುಗಳನ್ನು ದಾವೀದನು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅಷ್ಟರಲ್ಲಿ ಗತ್ ಊರಿನ ಯುದ್ಧವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ತನ್ನ ಸೈನ್ಯದಿಂದ ಹೊರಗೆ ಬಂದು ಮುಂಚಿನಂತೆಯೇ ಕೂಗಿದನು. ದಾವೀದನು ಅವನ ಮಾತುಗಳನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರೊಡನೆ ಮಾತಾಡುತ್ತಿರುವಾಗಲೇ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ತನ್ನ ಸೈನ್ಯದಿಂದ ಹೊರಗೆ ಬಂದನು. ಎಂದಿನಂತೆ ಯುದ್ಧ ಸವಾಲನ್ನು ಘೋಷಿಸಿದನು. ದಾವೀದನು ಅವನ ಮಾತುಗಳನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರೊಡನೆ ಮಾತಾಡುತ್ತಿರುವಷ್ಟರಲ್ಲಿ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ತನ್ನ ಸೈನ್ಯದಿಂದ ಹೊರಗೆ ಬಂದು ಮುಂಚಿನಂತೆಯೇ ಕೂಗಿದನು. ದಾವೀದನು ಅವನ ಮಾತುಗಳನ್ನು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬಳಿಕ ತನ್ನ ಸಹೋದರರನ್ನು ಕಂಡುಕೊಂಡು ಅವರೊಂದಿಗೆ ಮಾತಾಡತೊಡಗಿದನು. ಆ ಸಮಯದಲ್ಲಿ ಗತ್ ದೇಶದ ಗೊಲ್ಯಾತನೆಂಬ ಹೆಸರಿನ ಫಿಲಿಷ್ಟಿಯ ರಣವೀರನು ಆ ಸೇನೆಯಿಂದ ಹೊರಬಂದನು. ಗೊಲ್ಯಾತನು ಎಂದಿನಂತೆ ಇಸ್ರೇಲರ ವಿರುದ್ಧ ಆರ್ಭಟಿಸಿದನು. ದಾವೀದನಿಗೆ ಅವನ ಆರ್ಭಟವು ಕೇಳಿಸಿತು. ಅಧ್ಯಾಯವನ್ನು ನೋಡಿ |