Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:36 - ಕನ್ನಡ ಸಮಕಾಲಿಕ ಅನುವಾದ

36 ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:36
25 ತಿಳಿವುಗಳ ಹೋಲಿಕೆ  

ಆ ಫಿಲಿಷ್ಟಿಯನು, “ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ. ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ,” ಎಂದನು.


ಆ ದಿವಸದಲ್ಲಿ, ಅವಳ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವಾಗ, ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಚಲಿಸಲಾಗದ ಕಲ್ಲಾಗಿ ಮಾಡುತ್ತೇನೆ. ಅದನ್ನು ತೆಗೆದುಹಾಕಲು ಪ್ರಯತ್ನಿಸುವವರೆಲ್ಲರು ತಮ್ಮನ್ನು ತಾವೇ ಗಾಯಗೊಳಿಸಿಕೊಳ್ಳುತ್ತಾರೆ.


ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.


‘ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.’


“ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆಯಾಗಿರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಸ್ಸೀರಿಯದ ಅರಸನ ಕೈಯಿಂದ ಬಿಡಿಸಿದ್ದು ಉಂಟೋ?


ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರೆಂದೂ, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲವೆಂದೂ ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವರು.’


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.


ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು.


ಆಗ ನಾನು ಅದರ ಹಿಂದೆ ಹೋಗಿ, ಅದನ್ನು ಹೊಡೆದುಬಿಟ್ಟು, ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂದಿರುಗಿ ಬಿದ್ದಾಗ, ನಾನು ಅದರ ಗಡ್ಡವನ್ನು ಹಿಡಿದು, ಹೊಡೆದು ಕೊಂದುಹಾಕಿದೆನು.


ಇದಲ್ಲದೆ ದಾವೀದನು, “ನನ್ನನ್ನು ಸಿಂಹದ ಕೈಗೂ, ಕರಡಿಯ ಕೈಗೂ ತಪ್ಪಿಸಿಬಿಟ್ಟ ಯೆಹೋವ ದೇವರು, ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವರು,” ಎಂದನು. ಆಗ ಸೌಲನು ದಾವೀದನಿಗೆ, “ನೀನು ಹೋಗು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.


ಆಗ ಸೌಲನು, “ನಾನು ಅವನ ಮೇಲೆ ವಿರೋಧವಾಗಿ ಕೈಯೆತ್ತಬಾರದು. ಫಿಲಿಷ್ಟಿಯರು ಅದನ್ನು ಮಾಡಲಿ,” ಎಂದು ತನ್ನಷ್ಟಕ್ಕೆ ಅಂದುಕೊಂಡು ದಾವೀದನಿಗೆ, “ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು, ನೀನು ನನಗೋಸ್ಕರ ಪರಾಕ್ರಮಶಾಲಿಯಾಗಿದ್ದು ಯೆಹೋವ ದೇವರ ಯುದ್ಧಗಳನ್ನು ನಡೆಸು,” ಎಂದನು.


ಆದಕಾರಣ ಅವನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ ನೀನು ನಿನ್ನ ಖಡ್ಗವನ್ನು ಹಿರಿದು, ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.


ನೀನು ವಿದೇಶಿಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ. ಏಕೆಂದರೆ ನಾನೇ ಇದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.’ ”


ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ನಿಂದಿಸುವುದಕ್ಕೂ, ಅವರಿಗೆ ವಿರೋಧವಾಗಿ ಮಾತನಾಡುವುದಕ್ಕೂ ಪತ್ರಗಳನ್ನು ಬರೆದನು. ಅದರಲ್ಲಿ, “ಇತರ ದೇಶಗಳ ಜನಾಂಗಗಳ ದೇವರುಗಳು, ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ, ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸನು,” ಎಂದು ಬರೆದಿತ್ತು.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು