Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:4 - ಕನ್ನಡ ಸಮಕಾಲಿಕ ಅನುವಾದ

4 ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಬಂದನು. ಅವನ ಎತ್ತರ ಸುಮಾರು ಮೂರು ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಫಿಲಿಷ್ಟಿಯರ ಪಾಳೆಯದಿಂದ ಮಹಾ ಪರಾಕ್ರಮಿಯೊಬ್ಬನು ಹೊರಬಂದನು. ಅವನು ಗತ್ ಊರಿನವನು. ಅವನ ಹೆಸರು ಗೊಲ್ಯಾತ್. ಅವನ ಎತ್ತರ ಸುಮಾರು ಮೂರು ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಉಭಯರ ಮಧ್ಯದಲ್ಲಿ ಒಂದು ತಗ್ಗು ಇತ್ತು. ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಫಿಲಿಷ್ಟಿಯರಲ್ಲಿ ಗೊಲ್ಯಾತನೆಂಬ ಹೆಸರಿನ ವೀರ ಯೋಧನಿದ್ದನು. ಆತನು ಗತ್ ಊರಿನವನು. ಗೊಲ್ಯಾತನು ಒಂಭತ್ತು ಅಡಿ ಎತ್ತರವಾಗಿದ್ದನು. ಅವನು ಫಿಲಿಷ್ಟಿಯರ ಪಾಳೆಯದಿಂದ ಹೊರಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:4
11 ತಿಳಿವುಗಳ ಹೋಲಿಕೆ  

ಅನಾಕ್ಯರು ಇಸ್ರಾಯೇಲರ ದೇಶದಲ್ಲಿ ಒಬ್ಬರೂ ಉಳಿಯಲಿಲ್ಲ. ಗಾಜದಲ್ಲಿಯೂ, ಗತ್‌ನಲ್ಲಿಯೂ, ಅಷ್ಡೋದಿನಲ್ಲಿಯೂ ಮಾತ್ರ ಕೆಲವರು ಉಳಿದರು.


ಅವನು ಇವರ ಸಂಗಡ ಮಾತನಾಡಿಕೊಳ್ಳುತ್ತಾ ಇರುವಾಗ, ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು, ಮೊದಲಿನ ಹಾಗೆಯೇ ಮಾತನಾಡಿದನು. ಆ ಮಾತುಗಳನ್ನು ದಾವೀದನು ಕೇಳಿದನು.


ಅವನು ಏಳುವರೆ ಅಡಿ ಎತ್ತರವಾಗಿದ್ದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು; ಆ ಈಜಿಪ್ಟಿನವನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಷ್ಟು ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ, ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು.


ದಾವೀದನು ಗತ್ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲಾಯಿತು. ಆದ್ದರಿಂದ ಅವನು ಆ ತರುವಾಯ ದಾವೀದನನ್ನು ಹುಡುಕಲಿಲ್ಲ.


ರೆಫಾಯರಲ್ಲಿ ಬಾಷಾನಿನ ಅರಸನಾದ ಓಗನು ಮಾತ್ರ ಉಳಿದಿದ್ದನು. ಅವನ ಮಂಚವು ಕಬ್ಬಿಣದ ಮಂಚ. ಅದು ಅಮ್ಮೋನಿಯರ ರಬ್ಬಾದಲ್ಲಿ ಈಗಲೂ ಉಂಟಲ್ಲವೋ? ಅದರ ಉದ್ದ ಪುರುಷನ ಕೈ ಅಳತೆಯ ಪ್ರಕಾರ ಒಂಬತ್ತು ಮೊಳ, ಅಗಲ ನಾಲ್ಕು ಮೊಳ ಇತ್ತು.


“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.


ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ, ಇಸ್ರಾಯೇಲರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು. ಅವರ ಮಧ್ಯದಲ್ಲಿ ತಗ್ಗು ಇತ್ತು.


ಅವನ ತಲೆಯ ಮೇಲೆ ಕಂಚಿನ ಶಿರಸ್ತ್ರಾಣ ಇತ್ತು. ಪರೆಪರೆಯಾಗಿ ಜೋಡಿಸಲಾಗಿದ್ದ ಕವಚವನ್ನು ಅವನು ತೊಟ್ಟುಕೊಂಡಿದ್ದನು. ಆ ಕವಚವು ಸುಮಾರು ಐವತ್ತೇಳು ಕಿಲೋಗ್ರಾಂ ತೂಕವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು